ವಸತಿ ಗೃಹದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ
Sunday, March 15, 2026
ಉಡುಪಿ ನಗರದ ಹಳೆ ಸರಕಾರಿ ಬಸ್ ನಿಲ್ದಾಣದ ಸಮೀಪದ ವಸತಿ ಗೃಹದಲ್ಲಿ ಕೊಠಡಿ ಪಡೆದಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ.
ಮೃತರನ್ನು ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಜಿನ್ಸನ್ ಪಿ.ಎಂ. ಎಂದು ಗುರುತಿಸಲಾಗಿದೆ.
ವೈಯಕ್ತಿಕ ಕಾರಣಗಳಿಂದ ಮನನೊಂದು ಅವರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಉಡುಪಿ ನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಹಜರು ಪ್ರಕ್ರಿಯೆ ನಡೆಸಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.