-->
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ತಡೆ ನೀಡಿದ ಹೈಕೋರ್ಟ್


ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಹೊರಡಿಸಲಾಗಿರುವ ಆದೇಶವನ್ನು ಮಾರ್ಚ್ 26ರವರೆಗೆ ಅನುಷ್ಠಾನಗೊಳಿಸದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ 2026ರ ಮಾರ್ಚ್ 13ರಂದು ಪುತ್ತೂರು ವಿಭಾಗಾಧಿಕಾರಿ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ರಿಟ್ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಂ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಕೆಲ ಕಾಲ ಅರ್ಜಿ ಆಲಿಸಿದ ನ್ಯಾಯಪೀಠ, ಗಡಿಪಾರು ಆದೇಶಕ್ಕೆ ತಡೆ ನೀಡಿ ಮಧ್ಯಂತರ ಆದೇಶ ಹೊರಡಿಸಿದೆ . ಅಲ್ಲದೇ ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಪುತ್ತೂರು ಉಪ ವಿಭಾಗಾಧಿಕಾರಿ, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಠಾಣೆ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.

Ads on article

Advertise in articles 1

advertising articles 2

Advertise under the article