-->
 ಮಾದಕ ವಸ್ತು ಮಾರಾಟ; ನಾಲ್ವರು ಆರೋಪಿಗಳ ಬಂಧನ

ಮಾದಕ ವಸ್ತು ಮಾರಾಟ; ನಾಲ್ವರು ಆರೋಪಿಗಳ ಬಂಧನ


ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಬಂಧಿತರಿಂದ ಸುಮಾರು ರೂ.1,79,700 ಮೌಲ್ಯದ 17.97 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಇಂದಿರಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಶ್ರಫ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಂಡಿಎಂಎ ಸಂಗ್ರಹಿಸಿ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ರತ್ನಕುಮಾರ್ ಎಂ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ ಅಶ್ರಫ್ ಜಿ (38) ವಾಸವಿದ್ದ ಮನೆಯನ್ನು ಪರಿಶೀಲಿಸಿದಾಗ, ಅಶ್ರಫ್ ಜಿ ಜೊತೆಗೆ ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಹಾಗೂ ಅಶ್ರಫ್ ಎನ್.ಎ. ಅವರು ಇದ್ದರು. 

ಮನೆಯ ಪರಿಶೀಲನೆಯ ವೇಳೆ ಒಟ್ಟು 17.97 ಗ್ರಾಂ ತೂಕದ ಸುಮಾರು ರೂ.1,79,700 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಒಂದು ಚೂರಿ ಹಾಗೂ ಇತರ ವಸ್ತುಗಳು ಪತ್ತೆಯಾಗಿದ್ದು, ಪೊಲೀಸರು ಅವುಗಳನ್ನು ವಶಪಡಿಸಿಕೊಂಡಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


Ads on article

Advertise in articles 1

advertising articles 2

Advertise under the article