-->
 ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಕಾರಿ ಕಮೆಂಟ್; ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಕಾರಿ ಕಮೆಂಟ್; ಆರೋಪಿಯ ಬಂಧನ


ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಕಾರಿ ಬರಹ ಪ್ರಕಟಿಸಿದ ಆರೋಪಿಯನ್ನು ಉಳ್ಳಾಲ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. 

ಬಂಧಿತನನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲ್ಲೂಕಿನ ಜಾಲಿ ದೇವಿನಗರದ ಶಂಕರ್ ಮಸ್ತಪ್ಪ ಮೊಗೆರ್ (35 ವರ್ಷ) ಎಂದು ಗುರುತಿಸಲಾಗಿದೆ. ಈತನ ಮೊಬೈಲನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಬೇರೊಬ್ಬರು ಹಂಚಿಕೊAಡ ಪೋಸ್ಟ್ಗೆ ಆರೋಪಿಯು ‘ಶಂಕರ್11916’ ಎಂಬ ಖಾತೆಯನ್ನು ಬಳಸಿ ಸಪೋರ್ಟ್ ಮಾಡಿ ಬ್ರೋ ಉಳ್ಳಾಲ ಮಸೀದಿ ಹತ್ರ ಬಾಂಬ್ ಬ್ಲಾಸ್ಟ್ ಮಾಡ್ತೀನಿ ಎಂದು ಕಮೆಂಟ್ ಹಾಕಿದ್ದ. ಈ ಪೋಸ್ಟ್ ವೈರಲ್ ಆಗಿತ್ತು. ಈ ಬಗ್ಗೆ ಉಳ್ಳಾಲ ಠಾಣೆಯ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದರು. ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.


Ads on article

Advertise in articles 1

advertising articles 2

Advertise under the article