-->
 ಬಸ್ಸಿನೊಳಗಿದ್ದ ಬ್ಯಾಗ್‌ನಿಂದ ಚಿನ್ನಾಭರಣ ಕಳವು ಪ್ರಕರಣ; ಆರೋಪಿಯ ಬಂಧನ

ಬಸ್ಸಿನೊಳಗಿದ್ದ ಬ್ಯಾಗ್‌ನಿಂದ ಚಿನ್ನಾಭರಣ ಕಳವು ಪ್ರಕರಣ; ಆರೋಪಿಯ ಬಂಧನ


5 ತಿಂಗಳ ಹಿಂದೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುವಿನ ಸಮುದ್ರ ಹೋಟೇಲ್ ಬಳಿ ನಿಲ್ಲಿಸಿದ್ದ ಬಸ್ ನಿಂದ ಚಿನ್ನಾಭರಣ ಕಳವು ಮಾಡಿದ ಪ್ರಕರಣದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರ ತಂಡ ಬಂಧಿಸಿದ್ದಾರೆ.

ಬOಧಿತ ಆರೋಪಿಯನ್ನು ಮಧ್ಯಪ್ರದೇಶದ ನಿವಾಸಿ ಸಮದ್ ಖಾನ್ (37) ಎಂದು ಗುರುತಿಸಲಾಗಿದೆ.

2025 ರ ನವೆಂಬರ್ 19 ರಂದು ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುವಿನ ಸಮುದ್ರ ಹೋಟೆಲ್ ಬಳಿ ನಿಲ್ಲಿಸಿದ್ದ ದುರ್ಗಾಂಬಾ ಬಸ್‌ನೊಳಗಡೆ ಇರಿಸಿದ್ದ ಬ್ರಹ್ಮಾವರ ಮೂಲದ ದಂಪತಿಯ ಬ್ಯಾಗ್‌ನಿಂದ ರೂಪಾಯಿ 20 ಲಕ್ಷ ಮೌಲ್ಯದ 180 ಗ್ರಾಂ ಚಿನ್ನಾಭರಣ ಕಳವಾಗಿತ್ತು. ಪ್ರಕರಣಕ್ಕೆ ಸಂಬOಧಿಸಿದOತೆ ತನಿಖೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿOದ ಚಿನ್ನಾಭರಣಗಳನ್ನು ವಶಪಡಿಸಿಕೊಂಡು, ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.


Ads on article

Advertise in articles 1

advertising articles 2

Advertise under the article