-->
 ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗಾಗಿ ಕವನ ಸಂಕಲನಗಳ ಆಹ್ವಾನ

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗಾಗಿ ಕವನ ಸಂಕಲನಗಳ ಆಹ್ವಾನ


ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ  ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ  'ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ' ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ( ರಿ) ಉಡುಪಿ  ಸಂಸ್ಥೆಯು  2025ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನವನ್ನು ಆಹ್ವಾನಿಸಿದೆ.

ಆಸಕ್ತರು ತಮ್ಮ ಸ್ವರಚಿತ ಸ್ವತಂತ್ರ ಕವನ ಸಂಕಲನದ ಮೂರು ಪ್ರತಿಗಳನ್ನು  ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು.  

ರವಿರಾಜ್ ಎಚ್. ಪಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ, ಅಂಶುಮನೆ , ಬುಡ್ನಾರ್ ರಸ್ತೆ ಕುಂಜಿಬೆಟ್ಟು ಉಡುಪಿ  9845240309. ಕವನ ಸಂಕಲನಗಳ ಪ್ರತಿಗಳನ್ನು ಕಳುಹಿಸಲು ಕೊನೆಯ ದಿನಾಂಕ  ಮೇ  20, 2026 . ಪ್ರಶಸ್ತಿಯು ರೂಪಾಯಿ 10,000 ಗೌರವ ನಗದಿನೊಂದಿಗೆ ಪ್ರಶಸ್ತಿಪತ್ರ ಹಾಗೂ ಫಲಕವನ್ನು ಒಳಗೊಂಡಿರುತ್ತದೆ .

ಕೃತಿಗಳು ಸ್ವರಚಿತ, ಸ್ವತಂತ್ರ ಕವನ ಸಂಕಲನಗಳಾಗಿರಬೇಕು. ಅನುವಾದ, ರೂಪಾಂತರ, ಶಿಶುಪ್ರಾಸ, ಹನಿಗವನ ಇತ್ಯಾದಿ ಕೃತಿಗಳನ್ನು ಸ್ಪರ್ಧಗೆ ಪರಿಗಣಿಸಲಾಗುವುದಿಲ್ಲ ಎಂದು ಪ್ರಶಸ್ತಿಯ ಸಂಚಾಲಕರಾದ ಪೂರ್ಣಿಮಾ ಜನಾದ೯ನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Ads on article

Advertise in articles 1

advertising articles 2

Advertise under the article