-->
ಉಡುಪಿಯಲ್ಲಿ ಮಹಿಳೆಯ ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಉಡುಪಿಯಲ್ಲಿ ಮಹಿಳೆಯ ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ


ಉಡುಪಿಯ ಮೂಡುಬೆಳ್ಳೆ ಸಮೀಪದ ಕನರಾಡಿಯಲ್ಲಿ ಮಹಿಳೆಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

 ವಲೇರಿಯನ್ ಮೆಂಡೋನ್ಸಾ ಹಾಗೂ ಪ್ರವೀಣ್ ಮೆಂಡೋನ್ಸಾ  ಬಂಧಿತರು. ವನಜ ಪೂಜಾರಿ ಕೊಲೆಯಾದ ಮಹಿಳೆ. ಸೋಮವಾರ ರಾತ್ರಿ 8.30ರ ಸುಮಾರಿಗೆ ವಲೇರಿಯನ್ ಮೆಂಡೋನ್ಸಾ ಅವರ ಮನೆಯಲ್ಲಿ ಮಹಿಳೆ  ವನಜ ಪೂಜಾರಿ, ವಲೇರಿಯನ್ ಮೆಂಡೋನ್ಸಾ ಹಾಗೂ ಪ್ರವೀಣ್ ಒಟ್ಟಿಗೆ ಸೇರಿ  ಮದ್ಯ ಸೇವಿಸಿದ್ದರು. ಬಳಿಕ ಕುಡಿದ ಮತ್ತಿನಲ್ಲಿ ಗಲಾಟೆ ನಡೆದಿದೆ. ಈ ವೇಳೆ ವಲೇರಿಯನ್ ಮೆಂಡೋನ್ಸಾ, ಪ್ರವೀಣ್ ಮೆಂಡೋನ್ಸಾ ಕತ್ತಿಯಿಂದ ವನಜಾ ಪೂಜಾರಿ ಮೇಲೆ ಕಡಿದಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಇದೀಗ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. 

Ads on article

Advertise in articles 1

advertising articles 2

Advertise under the article