-->
 ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು

ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು


ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸಮೀಪದ ಅರಸಮಜಲು ಪ್ರದೇಶದಲ್ಲಿ ನಡೆದಿದೆ. 

ಮೃತಪಟ್ಟ ವಿದ್ಯಾರ್ಥಿಯನ್ನು ನಿಶಾಂತ್ (16) ಎಂದು ಗುರುತಿಸಲಾಗಿದೆ.  ಬುಧವಾರ ಮಧ್ಯಾಹ್ನದ ವೇಳೆ ಈತ ತನ್ನ ಸಂಬಂಧಿಕರ ಜೊತೆ ಮನೆ ಸಮೀಪದ ನೇತ್ರಾವತಿ ನದಿಗೆ ಈಜಲು ಹೋದಾಗ ಈ ಅವಘಡ ಸಂಭವಿಸಿದೆ. ನದಿಯಲ್ಲಿ ಮುಳುಗುತ್ತಿದ್ದ ನಿಶಾಂತ್‌ನನ್ನು ತಕ್ಷಣವೇ ರಕ್ಷಿಸಲು ಪ್ರಯತ್ನಿಸಲಾಯಿತಾದರೂ, ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದ ಎಂದು ತಿಳಿದುಬಂದಿದೆ. 








Ads on article

Advertise in articles 1

advertising articles 2

Advertise under the article