-->
 ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ ಸರ್ಕಾರ

ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ ಸರ್ಕಾರ


ಲಡಾಖ್ ಪ್ರತಿಭಟನೆಗಳಿಗೆ ಸಂಬOಧಿಸಿದOತೆ ಕಳೆದ ಆರು ತಿಂಗಳಿOದ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನದಲ್ಲಿದ್ದ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ಆದೇಶಿಸಿದೆ.

ಲಡಾಖ್‌ನಲ್ಲಿ ಶಾಂತಿಯನ್ನು ಪುನಃಸ್ಥಾಪಿಸಲು ಮತ್ತು ಸಂಭಾಷಣೆಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿರುವ ಕೇಂದ್ರ ಸರ್ಕಾರ, ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರ ಬಂಧನವನ್ನು ರದ್ದುಗೊಳಿಸಿದೆ.

ಲೇಹ್‌ನಲ್ಲಿ 2025 ರ ಸೆಪ್ಟೆಂಬರ್ 24ರಂದು ಗಂಭೀರ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ವಾಂಗ್‌ಚುಕ್ ಅವರನ್ನು ಸೆಪ್ಟೆಂಬರ್ 26, 2025 ರಂದು ಎನ್‌ಎಸ್‌ಎ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ಈ ಪ್ರದೇಶದಲ್ಲಿ ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಪಾಡುವ ಉದ್ದೇಶದಿಂದ ಲೇಹ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಬಂಧನ ಆದೇಶವನ್ನು ಹೊರಡಿಸಿದ್ದಾರೆ.

ಎನ್.ಎಸ್.ಎ ಅಡಿಯಲ್ಲಿ ವಾಂಗ್ಚುಕ್ ಈಗಾಗಲೇ ಗರಿಷ್ಠ ತಡೆಗಟ್ಟುವ ಬಂಧನದ ಅರ್ಧದಷ್ಟು ಅವಧಿಯನ್ನು ಅನುಭವಿಸಿದ್ದಾನೆ ಎಂದು ಸರ್ಕಾರ ಗಮನಿಸಿದೆ.

ವಾಂಗ್ಚುಕ್ ಅವರ ಪತ್ನಿ ಡಾ. ಗೀತಾಂಜಲಿ ಆಂಗ್ಮೋ ಅವರು ಕಳೆದ ಅಕ್ಟೋಬರ್‌ನಿಂದ ಅವರ ಬಂಧನವನ್ನು ಪ್ರಶ್ನಿಸಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ . ಬಂಧನದ ನಂತರ ಅವರನ್ನು ಜೋಧ್‌ಪುರ ಕೇಂದ್ರ ಕಾರಾಗೃಹಕ್ಕೆ ವರ್ಗಾಯಿಸಲಾಯಿತು.

ನ್ಯಾಯಮೂರ್ತಿ ಅರವಿಂದ್ ಕುಮಾರ್ ಮತ್ತು ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಅವರನ್ನೊಳಗೊಂಡ ಪೀಠವು ಮಾರ್ಚ್ 17 ರಂದು ಈ ಪ್ರಕರಣದ ವಿಚಾರಣೆ ನಡೆಸಲಿದೆ.


Ads on article

Advertise in articles 1

advertising articles 2

Advertise under the article