-->
ಕಟಪಾಡಿಯಲ್ಲಿ ರಸ್ತೆ ಮಧ್ಯೆ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್; ಸಂಚಾರ ಅಸ್ತವ್ಯಸ್ತ

ಕಟಪಾಡಿಯಲ್ಲಿ ರಸ್ತೆ ಮಧ್ಯೆ ಉರುಳಿ ಬಿದ್ದ ಗ್ಯಾಸ್ ಟ್ಯಾಂಕರ್; ಸಂಚಾರ ಅಸ್ತವ್ಯಸ್ತ


ಗ್ಯಾಸ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ ಉಡುಪಿ ಜಿಲ್ಲೆಯ ಕಟಪಾಡಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ನಡೆದಿದೆ. 


ಗ್ಯಾಸ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ನಿಯಂತ್ರಣ ಕಳೆದುಕೊಂಡು ಕಾರಿಗೆ ಡಿಕ್ಕಿಯಾಗಿದೆ. ಬಳಿಕ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದಿದೆ. ಟ್ಯಾಂಕರ್ ಉರುಳುತ್ತಿದ್ದಂತೆ ಅನಿಲ ಸೋರಿಕೆಯ ಆತಂಕ ಎದುರಾಗಿತ್ತು. ಅಲ್ಲದೇ ರಸ್ತೆಯುದ್ದಕ್ಕೂ ವಾಹನಗಳು ಸಾಲು ಗಟ್ಟಿ ನಿಂತಿದ್ದು, ಕೆಲ ಕಾಲ ಆತಂಕ ಉಂಟಾಗಿತ್ತು. 

ಅಗ್ನಿಶಾಮಕ ದಳದವರು ಆಗಮಿಸಿ ಅನಿಲ ಸೋರಿಕೆಯನ್ನು ತಡೆಗಟ್ಟಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article