-->
 ಕೌಟುಂಬಿಕ ಕಲಹ; ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನ

ಕೌಟುಂಬಿಕ ಕಲಹ; ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆಗೆ ಯತ್ನ


ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ನಡೆದಿದೆ. 

ಮೃತ ಮಹಿಳೆಯನ್ನು ಕುಮಾರಮಂಗಲ ಮೂಲದ ಸಾವಿತ್ರಿ (42) ಎಂದು ಗುರುತಿಸಲಾಗಿದೆ. ಆರೋಪಿ ಎಮೆಟ್ಟಿ ನಿವಾಸಿ ಪುರುಷೋತ್ತಮ ಅಲಿಯಾಸ್ ಬೈರಪ್ಪ ಎಂದು ಗುರುತಿಸಲಾಗಿದೆ. ದಂಪತಿ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿದ್ದು, ಈ ಸಂದರ್ಭದಲ್ಲಿ ಪುರುಷೋತ್ತಮ ತನ್ನ ಪತ್ನಿಯನ್ನು ಹತ್ಯೆ ಮಾಡಿದ್ದಾನೆ.  ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

Ads on article

Advertise in articles 1

advertising articles 2

Advertise under the article