-->
 ಅರಣ್ಯಾಧಿಕಾರಿ ಮನೆಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು

ಅರಣ್ಯಾಧಿಕಾರಿ ಮನೆಯಲ್ಲಿ ಕಳ್ಳತನ; ಲಕ್ಷಾಂತರ ರೂ. ಮೌಲ್ಯದ ನಗ ನಗದು ಕಳವು


ಅರಣ್ಯಾಧಿಕಾರಿಯೊಬ್ಬರು ನೆಲೆಸಿದ್ದ ಬಾಡಿಗೆ ಮನೆಗೆ ನುಗ್ಗಿದ ಕಳ್ಳರು ಬೈಕ್ ಸಹಿತ  181 ಗ್ರಾಂ ಚಿನ್ನ ಮತ್ತು ಬೆಳ್ಳಿ ಸೇರಿದಂತೆ ಹತ್ತೂವರೆ ಲಕ್ಷ ರೂಪಾಯಿ ನಗದು ದೋಚಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕಾಪಿಕಾಡುವಿನ ಅಂಬಿಕಾ ರೋಡ್ ಎಂಬಲ್ಲಿ ನಡೆದಿದೆ. 


ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರು ವಾಸವಿದ್ದ ಅಂಬಿಕಾರೋಡ್ ಕಾಪಿಕಾಡಿನ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿದೆ. ಮೆಹಬೂಬ್ ಸಾಬ್ ತನ್ನ ಪತ್ನಿ ಮತ್ತು ಮಗುವಿನೊಂದಿಗೆ ಅಂಬಿಕಾ ರೋಡ್ ನ ಬಾಡಿಗೆ ಮನೆಯಲ್ಲಿ ಕಳೆದ ಆರು ತಿಂಗಳುಗಳಿOದ ವಾಸವಿದ್ದರು. ಕಳೆದ ಶುಕ್ರವಾರ ಮಧ್ಯಾಹ್ನ ಮೆಹಬೂಬ್ ಕುಟುಂಬದೊOದಿಗೆ ತನ್ನ ಊರಾದ ಕೊಪ್ಪಳಕ್ಕೆ ತೆರಳಿದ್ದರು. ಇಂದು ಬೆಳಗ್ಗೆ ಊರಿಂದ ಮರಳಿದಾಗ ಈ ಕಳವು ಕೃತ್ಯ ಬೆಳಕಿಗೆ ಬಂದಿದೆ.

ಮನೆಯೊಳಗೆ ನುಗ್ಗಿದ ಕಳ್ಳರು ಹಾಲ್ ಮತ್ತು ಎರಡು ಕೋಣೆಯೊಳಗಿನ ಕಪಾಟುಗಳನ್ನು ಜಾಲಾಡಿದ್ದು ,ಲಾಕರ್ ಗಳಲ್ಲಿದ್ದ 181 ಗ್ರಾಂ ಚಿನ್ನ, ಮಗುವಿನ ಬೆಳ್ಳಿಯ ಆಭರಣಗಳು ಹಾಗೂ ಮೆಹಬೂಬ್ ಬ್ಯಾಂಕಿOದ ಸಾಲ ಪಡೆದಿದ್ದ ಹತ್ತೂವರೆ ಲಕ್ಷ ರೂ. ನಗದನ್ನು ದೋಚಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು, ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ.  


Ads on article

Advertise in articles 1

advertising articles 2

Advertise under the article