-->
ರಸ್ತೆಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ

ರಸ್ತೆಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ


ಉಡುಪಿ ಜಿಲ್ಲೆಯ ಬೈಂದೂರಿನ ಶಿರೂರು ಗ್ರಾಮದ ಕೋಣಮಕ್ಕಿ ಎಂಬಲ್ಲಿ  ಮನೆ ಕಳ್ಳತನ ಯತ್ನ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಪೌಜಾನ್ ಅಹ್ಮದ್ ಬಂಧಿತ ಆರೋಪಿ. ಈತ  ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ತನ್ನ ಸ್ಕೂಟರ್ ನಲ್ಲಿ ಭಯಾನಕ ರೀತಿಯಲ್ಲಿ ವೀಲಿಂಗ್ ಪ್ರಕರಣದಲ್ಲೂ ಭಾಗಿಯಾಗಿದ್ದ.

ಮಾರ್ಚ್ 18ರಂದು ಕೋಣಮಕ್ಕಿ ಫಾತಿಮಾ ಎಂಬವರ ಮನೆಯ ಹಿಂಬಾಗಿಲನ್ನು ಒಡೆದು ಒಳನುಗ್ಗಿ, ಮನೆಯಲ್ಲಿದ್ದ ಗೋಡೇಜ್ ಹುಡುಕಾಡುತ್ತಿದ್ದ ವೇಳೆ ಮನೆಯವರು ಬೊಬ್ಬೆ ಹಾಕಿದಾಗ, ಆರೋಪಿ ಹಿಂಬಾಗಿಲಿನಿಂದ ಪರಾರಿಯಾಗಿದ್ದನು, ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 30/2026 2 0 331(4), 305, 62 BNS ಅನ್ವಯ ಪ್ರಕರಣ ದಾಖಲಾಗಿದೆ. ಈತ  ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ತನ್ನ ಸ್ಕೂಟರ್ ನಲ್ಲಿ ಭಯಾನಕ ರೀತಿಯಲ್ಲಿ ವೀಲಿಂಗ್ ಪ್ರಕರಣದಲ್ಲೂ ಭಾಗಿಯಾಗಿದ್ದ.ಈ ಕುರಿತ ವಿಡಿಯೋ ವೈರಲ್ ಆಗಿತ್ತು. ಈ ಸಂಬಂಧ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 30/2026 ಅಡಿಯಲ್ಲಿ ಕಲಂ 281, 125 BNS 184, 129 R/W 194D IMV Act & a ದಾಖಲಾಗಿದೆ.

Ads on article

Advertise in articles 1

advertising articles 2

Advertise under the article