ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ವಿಕಾಸ್ ಹೆಗ್ಡೆ ನೇಮಕ
Wednesday, March 04, 2026
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ವಿಕಾಸ್ ಹೆಗ್ಡೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಫೆ. 9ರಂದು ಹೊರಡಿಸಲಾದ ಅಧಿಕೃತ ಆದೇಶದನ್ವಯ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಕುಂದಾಪುರ ವಿಧಾನಸಭಾ ಕ್ಷೇತ್ರದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಾರಥ್ಯವನ್ನು ವಿಕಾಸ್ ಹೆಗ್ಡೆ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ವಹಿಸಿಕೊಡಲಾಗಿದೆ.
ನೂತನ ಅಧ್ಯಕ್ಷರು ತಕ್ಷಣವೇ ಅಧಿಕಾರ ವಹಿಸಿಕೊಂಡು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನ ಹಾಗೂ ಸ್ಥಳೀಯ ನಾಯಕರ ಸಹಯೋಗದೊಂದಿಗೆ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
