ಟಿಪ್ಪರ್- ಸ್ಕೂಟರ್ ಡಿಕ್ಕಿ; ಸವಾರ ಸಾವು, ಸಹ ಸವಾರ ಗಂಭೀರ
Tuesday, March 24, 2026
ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಯುವಕನೊಬ್ಬ ಸಾವನ್ನಪ್ಪಿ ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮಾಳ ಮುಳ್ಳೂರು ಪ್ರದೇಶದಲ್ಲಿ ನಡೆದಿದೆ.
ಮೃತ ಯುವಕನನ್ನು ನವೀನ್ ಬಜಗೋಳಿ ಎಂದು ಗುರುತಿಸಲಾಗಿದೆ. ಅವರು ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದು, ಹಾವುಗಳನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡುವ ಸೇವೆಯಲ್ಲೂ ತೊಡಗಿಸಿಕೊಂಡಿದ್ದರು. ಇಂದು ಬೆಳಿಗ್ಗೆ ಹಾವು ಹಿಡಿದು ಅದನ್ನು ಕಾಡಿನಲ್ಲಿ ಬಿಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ನವೀನ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟರ್‌ನಲ್ಲಿದ್ದ ಸಹಸವಾರ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.