-->
ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ: ಮಲ್ಪೆಯ ಮೀನುಗಾರ ಮುಖಂಡ ಮಂಜು ಕೊಳಗೆ ಇರಿತ

ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ: ಮಲ್ಪೆಯ ಮೀನುಗಾರ ಮುಖಂಡ ಮಂಜು ಕೊಳಗೆ ಇರಿತ


ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದ ರಾಜಿ ಪಂಚಾಯಿತಿಯ ವೇಳೆ ಮಲ್ಪೆಯ ಸ್ಥಳೀಯ ಮೀನುಗಾರ ಮುಖಂಡನಿಗೆ ಚೂರಿಯಿಂದ ಇರಿದ ನಡೆದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ.

ಗಾಯಾಳುವನ್ನು ಮಂಜು ಕೊಳ ಯಾನೆ ಮಂಜುನಾಥ ಸಾಲಿಯಾನ್ ಎಂದು ಗುರುತಿಸಲಾಗಿದೆ. ಇವರು ಮಲ್ಪೆ ಭಾಗದ ಸ್ಥಳೀಯ ಮೀನುಗಾರ ಮುಖಂಡರಾಗಿದ್ದಾರೆ. ಮಲ್ಪೆಯ ಯುವಕನೊಬ್ಬ ಮತ್ತು ಪಡುಬಿದ್ರಿ ಪಲಿಮಾರು ಪರಿಸರದ ಯುವತಿಯ ನಡುವೆ ಪ್ರೇಮ ಸಂಬಂಧ ಇದ್ದ ಹಿನ್ನೆಲೆಯಲ್ಲಿ ರಾಜಿ ಮಾತುಕತೆ ನಡೆಸಲು ಎರಡೂ ಕಡೆಯವರು ಸೇರಿದ್ದರು ಎನ್ನಲಾಗಿದೆ.

ಈ ವೇಳೆ ಮಾತುಕತೆ ತೀವ್ರಗೊಂಡು, ಯುವತಿಯ ಕಡೆಯವರಲ್ಲಿದ್ದ ಕೆಲವರು ಮಂಜು ಕೊಳ ಅವರಿಗೆ ಇರಿದಿರುವುದಾಗಿ ತಿಳಿದುಬಂದಿದೆ. ಗಾಯಗೊಂಡ ಮಂಜು ಕೊಳ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ 5 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರೋಪಿಗಳು ಪೊಲೀಸ್ ವಶದಲ್ಲಿದ್ದಾರೆ. ಇದು ಯಾವುದೇ ಕೋಮು ಸಂಘರ್ಷದ ಘಟನೆಯಲ್ಲ. ಈ ಬಗ್ಗೆ ಯಾವುದೇ ಸುಳ್ಳು ಸುದ್ದಿ ಹರಡದಂತೆ ಉಡುಪಿ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಘಟನೆಯ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Ads on article

Advertise in articles 1

advertising articles 2

Advertise under the article