ದ.ಕ, ಉಡುಪಿಯಲ್ಲಿ ತಾಪಮಾನ ಏರಿಕೆ; ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚನೆ
Thursday, March 12, 2026
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ಬೇಗೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು, ಬುಧವಾರ ಮತ್ತು ಗುರುವಾರ (ಮಾರ್ಚ್ 12) ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ, ಈ ಜಿಲ್ಲೆಗಳಲ್ಲಿ ಬೇಸಿಗೆಯ ಸರಾಸರಿ ತಾಪಮಾನಕ್ಕಿಂತ ಹೆಚ್ಚಿನ ಉಷ್ಣಾಂಶ ದಾಖಲಾಗುವ ಸಾಧ್ಯತೆ ಇದೆ. ತಾಪಮಾನವು ಸಾಮಾನ್ಯಕ್ಕಿಂತ 4ರಿಂದ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಮಾರ್ಚ್ 10 ಮತ್ತು 11 ರ ನಡುವೆ ದಾಖಲಾದ ಅಂಕಿ-ಅಂಶಗಳ ಪ್ರಕಾರ ರಾಜ್ಯದ ಪ್ರಮುಖ ಜಿಲ್ಲೆಗಳ ತಾಪಮಾನ:
ದಕ್ಷಿಣ ಕನ್ನಡ: 37°C (ಅತ್ಯಧಿಕ)
ಕಲಬುರಗಿ ಮತ್ತು ಉತ್ತರ ಕನ್ನಡ: 36.6°C
ಹಾವೇರಿ: 36.4°C
ಉಡುಪಿ: 35.8°C
ಬಾಗಲಕೋಟೆ, ಬೆಳಗಾವಿ, ಶಿವಮೊಗ್ಗ, ಧಾರವಾಡ: 35°C
ಮಾರ್ಚ್ 12ರಂದು ಬಿಸಿ ಗಾಳಿಯ ಅಲೆಗಳು ಅಪ್ಪಳಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.