ಕಾಪು ಹೊಸ ಮಾರಿಗುಡಿಗೆ ನಟಿ ಶಾನ್ವಿ ಶ್ರೀವಾಸ್ತವ ಭೇಟಿ
Thursday, March 12, 2026
ಕನ್ನಡ ಹಾಗೂ ತೆಲುಗು ಚಿತ್ರರಂಗದ ಖ್ಯಾತ ನಟಿ ಶಾನ್ವಿ ಶ್ರೀವಾಸ್ತವ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರ್ಶನ ಪಡೆದರು.
ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಹಾಗೂ ಅಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಗೌರವಿಸಲಾಯಿತು. ದೇವಾಲಯದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಅವರು ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು.
ದೇವಾಲಯದಲ್ಲಿರುವ ಅಮ್ಮನ ಸ್ವರ್ಣ ಗದ್ದುಗೆಯನ್ನು ಹಾಗೂ ದೇವಳದ ಸುಂದರ ಕೆತ್ತನೆಗಳನ್ನು ವೀಕ್ಷಿಸಿದ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಚಿತ್ರೀಕರಣದ ಸಂದರ್ಭ ಇಲ್ಲಿಗೆ ಬರುವ ಅವಕಾಶ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಸಮಯ ಮಾಡಿಕೊಂಡು ಮತ್ತೊಮ್ಮೆ ದೇವಾಲಯಕ್ಕೆ ಭೇಟಿ ನೀಡುವುದಾಗಿ ಹೇಳಿದರು. ಈ ವೇಳೆ ದೇವಾಲಯದ ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.