ಸ್ಕೂಟರ್‌ಗೆ ಕಾರು ಡಿಕ್ಕಿ; ಬಾಲಕಿ ಸಾವು, ಇಬ್ಬರಿಗೆ ಗಾಯ
Tuesday, March 17, 2026
ಸ್ಕೂಟರ್ ಗೆ ಕಾರೊಂದು ಡಿಕ್ಕಿ ಹೊಡೆದು 5 ವರ್ಷದ ಬಾಲಕಿ ಸಾವನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿ ಎಂಬಲ್ಲಿ ಸಂಭವಿಸಿದೆ.
ಮೃತರನ್ನು ಐದು ವರ್ಷ ಪ್ರಾಯದ ಸುಹೈರಾ ಎಂದು ಗುರುತಿಸಲಾಗಿದೆ. ತಣ್ಣಿರುಪಂತ ಗ್ರಾಮದ ಕೊಡಂಗೆ ಮನೆ ನಿವಾಸಿ ಇಸ್ಮಾಯಿಲ್ ಎಂಬವರು ತನ್ನ ಮಗಳು ಸಾಜಿರಾ ಮತ್ತು ಮೊಮ್ಮಗಳು ಸುಹೈರಾ ಅವರನ್ನು ಕುಳ್ಳಿರಿಸಿಕೊಂಡು ಕಲ್ಲೇರಿಯಿಂದ ಕುಪ್ಪೆಟ್ಟಿಗೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡೆಯಿತು. ಗಂಭೀರವಾಗಿ ಗಾಯಗೊಂಡ ಸುಹೈರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಬಾಲಕಿಯ ತಾಯಿ ಸಾಜಿರಾ (33) , ದ್ವಿಚಕ್ರ ವಾಹನ ಸವಾರ ಬಾಲಕಿಯ ಅಜ್ಜ ಇಸ್ಮಾಯಿಲ್ (60) ಎಂಬವರು ಗಾಯಗೊಂಡಿದಾರೆ.
ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.