-->
 ಕಾರು- ಎಕ್ಸ್ ಪ್ರೆಸ್ ಬಸ್ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

ಕಾರು- ಎಕ್ಸ್ ಪ್ರೆಸ್ ಬಸ್ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ


ಕಾರು ಮತ್ತುಎಕ್ಸ್ ಪ್ರೆಸ್ ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಕಾರು ಮತ್ತು ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡ ಘಟನೆ ಇಂದು(ಮಾ. 18) ಉಡುಪಿಯ ಸಂತೆಕಟ್ಟೆಯಲ್ಲಿ ಸಂಭವಿಸಿದೆ.


ವಾಹನವೊಂದನ್ನು ಹಿಂದಿಕ್ಕುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಬಲೆನೊ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ನಿವಾಸಿಗಳು ಮತ್ತು ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಗಳಲ್ಲಿ ಸಹಾಯ ಮಾಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಯಿತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Ads on article

Advertise in articles 1

advertising articles 2

Advertise under the article