ಕೊಪ್ಪಲಂಗಡಿ ವಾಸುದೇವಸ್ಚಾಮಿ ದೇವಸ್ಥಾನದಿಂದ ಶ್ರೀ ಕ್ಷೇತ್ರ ಕಟೀಲಿಗೆ ಪಾದಯಾತ್ರೆ
Monday, March 16, 2026
ಕಾಪು ಕೊಪ್ಪಲಂಗಡಿ ಶ್ರೀ ವಾಸುದೇವ ಸ್ವಾಮಿ ಭಜನಾ ಮಂಡಳಿಯ ನೇತೃತ್ವದಲ್ಲಿ ಶ್ರೀ ವಾಸುದೇವ ಸ್ವಾಮಿ ದೇವಸ್ಥಾನದಿಂದ ಶ್ರೀ ಕ್ಷೇತ್ರ ಕಟೀಲಿಗೆ ಶನಿವಾರ ಎಂಟನೇ ವರ್ಷದ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಯಿತು.
ಶ್ರೀ ವಾಸುದೇವ ಸ್ವಾಮಿ ದೇವಸ್ಥಾನದಲ್ಲಿ ದೇವಸ್ಥಾನದ ತಂತ್ರಿ ವೇ. ಮೂ. ಶ್ರೀಶ ತಂತ್ರಿ ಅವರ ನೇತೃತ್ವದಲ್ಲಿ, ಅರ್ಚಕ ನಾಗರಾಜ ಭಟ್ ಉಪಸ್ಥಿತಿಯಲ್ಲಿ ಸಾಮೂಹಿಕ ಪ್ರಾರ್ಥನೆ ನೇರವೇರಿಸಿದ ಬಳಿಕ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಪಾದಯಾತ್ರೆಗೆ ಚಾಲನೆ ನೀಡಿದರು.
ಶ್ರೀ ವಾಸುದೇವ ಸ್ವಾಮಿ ಭಜನಾ ಮಂಡಳಿ, ಮಹಿಳಾ ಪದಾಧಿಕಾರಿಗಳು ಮತ್ತು ಸದಸ್ಯರು ಸೇರಿದಂತೆ ಕಾಪು ಪರಿಸರದ ಸುಮಾರು 400 ಕ್ಕೂ ಅಧಿಕ ಮಂದಿ ಭಕ್ತಾಧಿಗಳು ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಮಹತೋಭಾರ ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ರವಿ ಕುಮಾರ್ ಮಂದಾರ, ಶ್ರೀ ವಾಸುದೇವ ಸ್ವಾಮಿ ಭಜನಾ ಮಂಡಳಿಯ ಗೌರವಾಧ್ಯಕ್ಷ ಉದಯ್ ಶೆಟ್ಟಿ, ಅಧ್ಯಕ್ಷ ನಾಗೇಶ್ ಸಾಲ್ಯಾನ್, ಪ್ರಮುಖರಾದ ಅನಿಲ್ ಶೆಟ್ಟಿ ಉಮೇಶ್ ಪೂಜಾರಿ, ರಘುರಾಮ ಶೆಟ್ಟಿ, ಹರೀಶ್, ದಿವಾಕರ ಶೆಟ್ಟಿ ಮಲ್ಲಾರು, ರವಿ ಬಿಂದಾಸ್, ಸಚಿನ್ ರಾಮನಗರ ಮೊದಲಾದವರು ಪಾಲ್ಗೊಂಡಿದ್ದರು.
.jpeg)
.jpeg)