-->
 ರಸ್ತೆ ಅಪಘಾತ: ಪಂಚಾಯತ್ ರಾಜ್ ಕಾರ್ಯಕರ್ತ ಶ್ರೀನಿವಾಸ ಗಾಣಿಗ ನಿಧನ

ರಸ್ತೆ ಅಪಘಾತ: ಪಂಚಾಯತ್ ರಾಜ್ ಕಾರ್ಯಕರ್ತ ಶ್ರೀನಿವಾಸ ಗಾಣಿಗ ನಿಧನ


ಕುಂದಾಪುರದ ತಲ್ಲೂರು-ಪ್ರವಾಸಿ ಮಂದಿರದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕುಂದಾಪುರ ತಾಲೂಕು ಗಾಣಿಗ ಸಮಾಜ ಸಂಘಟನೆಯ ಮಾಜಿ ಅಧ್ಯಕ್ಷ ಹಾಗೂ ಪಂಚಾಯತ್ ರಾಜ್ ಕಾರ್ಯಕರ್ತ ಶ್ರೀನಿವಾಸ ಗಾಣಿಗ (68) ಅವರು ಮೃತಪಟ್ಟಿದ್ದಾರೆ.

ಪಂಚಾಯತ್ ರಾಜ್ ಹಕ್ಕೊತ್ತಾಯ ಆಂದೋಲನದ ಸಕ್ರಿಯ ಕಾರ್ಯಕರ್ತರಾಗಿದ್ದ ಶ್ರೀನಿವಾಸ ಗಾಣಿಗ ಅವರ  ರಾತ್ರಿ ಕುಂದಾಪುರದಲ್ಲಿ ಆಯೋಜಿಸಲಾಗಿದ್ದ ಸಭಾ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಬೈಕಿನಲ್ಲಿ ಕಟ್ ಬೆಲ್ಲೂರು ಕಡೆಗೆ ತೆರಳುತ್ತಿದ್ದರು. ತಲ್ಲೂರು ಸಮೀಪದ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ವೇಳೆ ಶ್ರೀನಿವಾಸ ಅವರು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ಅವರನ್ನು ಸ್ಥಳೀಯರು ತಕ್ಷಣವೇ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ತೀವ್ರ ರಕ್ತಸ್ರಾವದಿಂದಾಗಿ ಅವರು ಮೃತಪಟ್ಟಿದ್ದಾರೆ. 

ಮೃತ ಶ್ರೀನಿವಾಸ ಗಾಣಿಗ ಅವರು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ನಮ್ಮ ಭೂಮಿ ಸಂಸ್ಥೆಯಲ್ಲಿ ಕಳೆದ 15 ವರ್ಷಗಳಿಂದ ಇಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದರು. ಕುಂದಾಪುರ ತಾಲೂಕು ಗಾಣಿಗ ಸಮಾಜದ ಮಾಜಿ ಅಧ್ಯಕ್ಷರಾಗಿ ಸಮುದಾಯದ ಏಳಿಗೆಗೆ ಶ್ರಮಿಸಿದ್ದರು. ಪಂಚಾಯತ್ ರಾಜ್ ಹಕ್ಕೊತ್ತಾಯ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದ ಅವರು ಗ್ರಾಮ ಸ್ವರಾಜ್ಯದ ಕನಸು ಕಂಡಿದ್ದರು. ಮೃತರು ಪತ್ನಿ, ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲಲಿತಾ ಗಾಣಿಗ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. 


Ads on article

Advertise in articles 1

advertising articles 2

Advertise under the article