ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯ ರಕ್ಷಣೆ; ಜಿಲ್ಲಾಸ್ಪತ್ರೆಗೆ ದಾಖಲು
Monday, March 30, 2026
ಉಡುಪಿಯ ಕಲ್ಯಾಣಪುರ ಅಟೋ ನಿಲ್ದಾಣದ ಬಳಿ ಕುಸಿದುಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಸ್ಥಳೀಯ ಅಟೋ ಚಾಲಕರ ಸಹಕಾರದಿಂದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ವ್ಯಕ್ತಿಯ ಹೆಸರು ವೀರಪ್ಪ, ಭೀಮಪ್ಪ ಬೆಳಗಾವಿ ಎಂದು ತಿಳಿದುಬಂದಿದೆ. ರೋಗಿಯು ಮೂತ್ರಪಿಂಡ, ಯಕೃತ್ತು ಸಮಸ್ಯೆಯಿಂದ ಬಳಲುತ್ತಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನಡೆಯುತ್ತಿದೆ. ಸಂಬAಧಿಕರು ಯಾರಾದರೂ ಇದ್ದಲ್ಲಿ ಉಡುಪಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.