ಬೈಕ್‌ಗೆ ಟಿಪ್ಪರ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
Friday, March 20, 2026
ಟಿಪ್ಪರ್ ಲಾರಿಯು ಬೈಕ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಪಳ್ಳಿ ಅಡಪಾಡಿ ಎಂಬಲ್ಲಿ ನಡೆದಿದೆ.
ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್(27) ಮೃತ ಬೈಕ್ ಸವಾರ. ಇವರು ತಮ್ಮ ಬೈಕ್ ನಲ್ಲಿ ಹಂಪನಕಟ್ಟೆ ಕಡೆಗೆಎ ತೆರಳುತ್ತಿದ್ದ ವೇಳೆ ಲಾರಿಯೊಂದು ಹಿಂದಿನಿOದ ಡಿಕ್ಕಿಯಾಗಿದೆ. ರಸ್ತೆಗೆ ಎಸೆಯಲ್ಪಟ್ಟ ಗಣೇಶ್ ನಾಯಕ್ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.