-->
 ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಕ್ರಮಕೈಗೊಳ್ಳಿ; ಶಾಸಕ ಯಶ್‌ಪಾಲ್ ಸುವರ್ಣ

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಕ್ರಮಕೈಗೊಳ್ಳಿ; ಶಾಸಕ ಯಶ್‌ಪಾಲ್ ಸುವರ್ಣ


ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗ್ರತಾ ಕ್ರಮ ವಹಿಸಿ, ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಕಾರ್ಯತಂತ್ರ ರೂಪಿಸಬೇಕೆಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಸೂಚಿಸಿದರು. 


ಕುಡಿಯುವ ನೀರಿನ ಸಮರ್ಪಕ ಪೂರೈಕೆ ಕುರಿತಂತೆ ಉಡುಪಿಯ ತಾಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಈ ವರ್ಷ ಯಾವುದೇ ಪಂಚಾಯತ್‌ನಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿಲ್ಲ. ಇಲ್ಲಿವರೆಗೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡಿಲ್ಲ ಎಂದು ಅಧಿಕಾರಿಗಳು ಶಾಸಕರ ಗಮನಕ್ಕೆ ತಂದರು. 


ಇದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಯಶ್ ಪಾಲ್ ಸುವರ್ಣ, ಏಪ್ರಿಲ್ ತಿಂಗಳಲ್ಲಿ ಉಡುಪಿಯ ಪಂಚಾಯತ್ ವ್ಯಾಫ್ತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಈಗಲೇ ಕಾರ್ಯ ಪ್ರವೃತ್ತರಾಗಬೇಕು. ಗ್ರಾಮ ಪಂಚಾಯತ್‌ಗಳಲ್ಲಿ ಕುಡಿಯುವ ನೀರಿನ ಲಭ್ಯತೆ ಕುರಿತು ಸಮೀಕ್ಷೆ ನಡೆಸಿ ತಾಲೂಕು ಪಂಚಾಯತ್‌ಗೆ ವರದಿ ಸಲ್ಲಿಸಬೇಕು ಎಂದರು.

ಈ ಹಿಂದೆ ನೀರಿನ ಕೊರತೆ ಕಂಡ ಬಂದ ವಸತಿ ಪ್ರದೇಶಗಳನ್ನು ಗುರುತಿಸಿ, ನೀರಿನ ಪೂರೈಕೆ ಸಮರ್ಪಕಗೊಳಿಸಲು ಕಾರ್ಯತಂತ್ರ ರೂಪಿಸಬೇಕು. ಹಾಳಾಗಿರುವ ಪೈಪ್‌ಲೈನ್, ವಾಟರ್ ಪಂಪ್ ಹಾಗೂ ಟ್ಯಾಂಕ್ ಗಳನ್ನು ತುರ್ತಾಗಿ ದುರಸ್ಥಿ ಮಾಡಬೇಕು. ನೀರಿನ ತೀವ್ರ ಕೊರತೆ ಇರುವ ಪ್ರದೇಶಗಳಿಗೆ ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಸೂಕ್ತ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಎಲ್ಲಾ ಬೋರ್‌ವೆಲ್‌ಗಳು, ಓವರ್ ಹೆಡ್ ಟ್ಯಾಂಕ್‌ಗಳು ಹಾಗೂ ನೀರು ಸರಬರಾಜು ಯೋಜನೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಸಾರ್ವಜನಿಕರಿಂದ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಬರುವ ದೂರುಗಳನ್ನು ಸ್ವೀಕರಿಸಿ, ತ್ವರಿತವಾಗಿ ಸ್ಪಂದಿಸಿ, ನೀರು ಸರಬರಾಜು ಸುಗಮಗೊಳಿಸಲು ಸೂಕ್ತ ಪೂರ್ವ ತಯಾರಿ ನಡೆಸಬೇಕು. ವಿದ್ಯುತ್ ನಿಲುಗಡೆ ಅಥವಾ ವ್ಯತ್ಯಯದಿಂದ ನೀರು ಸರಬರಾಜಿನಲ್ಲಿ ದೀರ್ಘಕಾಲದ ವ್ಯತ್ಯಯ ಉಂಟಾಗದOತೆ ಮೆಸ್ಕಾಂ ಇಲಾಖೆಯೊಂದಿಗೆ ಸಮರ್ಪಕ ಸಮನ್ವಯತೆ ಹೊಂದುವುದು. ಅಗತ್ಯವಿದ್ದಲ್ಲಿ ಬೋರ್ ವೆಲ್ ಅಥವಾ ಬಾವಿಗಳನ್ನು ಆಳಗೊಳಿಸುವುದಕ್ಕೆ ಸೂಕ್ತ ಕ್ರಮಕೈಗೊಳ್ಳುವುದು. ಹೆಚ್ಚುವರಿ ಮೋಟಾರ್ ಪಂಪ್‌ಗಳ ಅಗತ್ಯವಿದ್ದಲ್ಲಿ ಖರೀದಿಸಿ ಇಟ್ಟುಕೊಳ್ಳುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಸಭೆಯಲ್ಲಿ ಉಡುಪಿ ತಹಶೀಲ್ದಾರ್ ಗುರುರಾಜ್, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ವಿಜಯ, ತೋಟಗಾರಿಕಾ ಸಹಾಯಕ ನಿರ್ದೇಶಕ ಹೇಮಂತ್ ಕುಮಾರ್ ಉಪಸ್ಥಿತರಿದ್ದರು. 

Ads on article

Advertise in articles 1

advertising articles 2

Advertise under the article