ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸಾವು
Wednesday, March 04, 2026
ಬೈಕೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸವಾರ ಸಾವನಪ್ಪಿದ ಘಟನೆ ಪುತ್ತೂರಿನ ಕುಂಬ್ರ-ಬೆಳ್ಳಾರೆ ರಸ್ತೆಯ ತ್ಯಾಜ್ಯ ನಗರದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಕುಂಬ್ರ ಶಾಲಾ ಬಳಿಯ ನಿವಾಸಿ ಭುವನ್ (33) ಎಂದು ಗುರುತಿಸಲಾಗಿದೆ. ಮೃತರು ನಿಂತಿಕಲ್ಲಿನ ಬಾರ್ ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಮಂಗಳವಾರ ಕೆಲಸಕ್ಕೆ ರಜೆ ಹಾಕಿದ್ದರು. ಕೆಯ್ಯೂರು ಕಡೆಗೆ ಹೋಗಿ ಮರಳಿ ಮನೆಗೆ ಬರುತ್ತಿದ್ದ ವೇಳೆ ಬೈಕ್ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಮೃತರು ತಾಯಿ, ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.