ಶಿವಮೊಗ್ಗ ರಸ್ತೆ ಅಪಘಾತ; ಕಾರ್ಕಳ ಮೂಲದ ಯುವತಿ ಸಾವು
Friday, March 13, 2026
ನೀರು ಸಾಗಾಟದ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರ್ಕಳ ಮೂಲದ, ಮೆಡಿಕಲ್ ಪಿಜಿ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಕಾರ್ಕಳ ಮೂಲದ ಲಾವಣ್ಯಾ (25) ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದಲ್ಲಿದ್ದ ಮತ್ತೋರ್ವ ಯುವತಿಯೂ ಗಂಭೀರ ಗಾಯಗೊಂಡಿದ್ದು, ಆಸತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ನಡೆಯುತ್ತಿರುವ ಕಟ್ಟಡ ಕಾಮಗಾರಿಗೆ ಟ್ಯಾಂಕರ್ ನಲ್ಲಿ ನೀರು ಪೂರೈಕೆ ಮಾಡುತ್ತಿರುವ ವೇಳೆ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆ ಸಂಬOಧ ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.