ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಯ ಬಂಧನ
Thursday, March 19, 2026
9 ವರ್ಷದ ಬಾಲಕನನ್ನು ಹಣ ಹಾಗೂ ತಿಂಡಿ ನೀಡುವ ನೆಪದಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೋಟೆಕಾರು ಮಡ್ಯಾರ್ ನಿವಾಸಿ ಆಶೀಶ್ ಪೂಜಾರಿ (33) ಎಂದು ಗುರುತಿಸಲಾಗಿದೆ. ಈತ ಬಿಜೈಯ ಎಂಎಸ್ಸಿ ಲಾಜಿಸ್ಟಿಕ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ.
ದೂರಿನ ಪ್ರಕಾರ, ಆರೋಪಿಯು ಬಾಲಕನಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅಸಭ್ಯ ಕ್ರಿಯೆಗಳಿಗೆ ಪ್ರೇರೇಪಿಸಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
ಈ ಸಂಬಂಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯ ಸೆಕ್ಷನ್ 4, 6, 12 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಕಾಯ್ದೆಯ ಸೆಕ್ಷನ್ 75 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.