ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್: ಆರೋಪಿಯ ಬಂಧನ
Saturday, March 28, 2026
ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿಯಾಗಿ ಬರಹ ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕಾಸರಗೋಡು ಜಿಲ್ಲೆ ಮಂಜೇಶ್ವರದ ಗಣೇಶ್ ಪ್ರಸಾದ್ ಬಂಧಿತ ಆರೋಪಿ. ಜನವರಿ ತಿಂಗಳಿನಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ (ಕುರಾನ್ ಸ್ಫಟಿಸುವ) ಸ್ಪರ್ದೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದ್ದಾಗ ಗಣೇಶ್ ಪ್ರಸಾದ್ ಎಂಬಾತನು ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ್ದ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 15/2026 ಕಲಂ 196 ಬಿ.ಎನ್.ಎಸ್ ಮತ್ತು 66 ಐಟಿ ಕಾಯ್ದೆಯಂತೆ ಪ್ರಕರಣ ದಾಖಲಾಗಿತ್ತು.
ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ದಸ್ತಗಿರಿ ಮಾಡಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ .