ಈದುಲ್ ಫಿತ್ರ್ ಹಿನ್ನೆಲೆ; ದ.ಕ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ
Thursday, March 19, 2026
ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತ್ರ್ ಶುಕ್ರವಾರ ನಡೆಯಲಿರುವುದರಿಂದ ದ.ಕ ಹಾಗೂ ಉಡುಪಿ ಜಿಲ್ಲೆಗೆ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಇಂದು ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಈದುಲ್ ಫಿತರ್ ಆಚರಣೆಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಯಲ್ಲಿ ನಾಳೆ (ಶುಕ್ರವಾರ) ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.
