-->
ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಚಪ್ಪರ ಮುಹೂರ್ತ(Video)

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಚಪ್ಪರ ಮುಹೂರ್ತ(Video)



ಉಡುಪಿ ಜಿಲ್ಲೆಯ ಅತೀ ಪುರಾತನ ದೇವಾಲಯಗಳಲ್ಲಿ ಒಂದಾದ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮ ಕಲಶೋತ್ಸವದ ಪೂರ್ವ ಸಿದ್ಧತಾ ಕಾರ್ಯಗಳು ಭರದಿಂದ ಸಾಗುತ್ತಿದೆ. 1 ಸಾವಿರ ವರ್ಷಗಳ ಇತಿಹಾಸವಿರುವ ಎಂಟು ಮಾಗಣೆಗೆ ಒಳಪಟ್ಟ ಬನ್ನಂಜೆ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾರ್ಚ್ 27ರ ಶುಕ್ರವಾರ ಚಪ್ಪರ ಮುಹೂರ್ತವನ್ನು ನೆರವೇರಿಸಲಾಯಿತು. 



ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ನಡೆಯುವ ಚಪ್ಪರ ಮುಹೂರ್ತವು ದೇವಸ್ಥಾನದ ಮಹೋತ್ಸವಗಳಲ್ಲಿ ಪ್ರಮುಖ ಸಂಪ್ರದಾಯವಾಗಿದ್ದು, ದೇವಸ್ಥಾನದ ಅರ್ಚಕ ಮಧುಸೂದನ್ ಉಪಾಧ್ಯಾಯ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. 


ಬಳಿಕ ಅತಿಥಿ ಗಣ್ಯರ ಸಮ್ಮುಖದಲ್ಲಿ ಚಪ್ಪರ ಕಂಬವನ್ನು ಏರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ  ಉಚ್ಚಿಲ ಮೊಗವೀರ ಮಹಾಜನ ಸಭಾದ ಅಧ್ಯಕ್ಷ ಜಯಕೋಟ್ಯಾನ್, ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ, ಅತ್ಯಂತ ಯಶಸ್ವಿಯಾಗಿ ಕಾರ್ಯಕ್ರಮ ಮೂಡಿ ಬರಲಿ ಎಂದು ಶುಭ ಹಾರೈಸಿದರು. 


ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಉಡುಪಿ ಜಿಲ್ಲೆ ಸಾಂಸ್ಕೃತಿಕ ನಗರಿ. ಇತ್ತೀಚಿನ ದಿನಗಳಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೈವಸ್ಥಾನ, ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿದೆ. ದೇವರ ಕೆಲಸ ಕಾರ್ಯಗಳು ನಿರ್ವಿಘ್ನವಾಗಿ ಪವಾಡದಂತೆ ನಡೆಯುತ್ತಿದೆ. ದೇವರು ಅವರಿಗೆ ಏನು ಬೇಕು ಎನ್ನುವುದನ್ನು ಭಕ್ತರ ಮೂಲಕ ನೆರವೇರಿಸಿಕೊಳ್ಳುತ್ತಾನೆ. ದೇವಾಲಯದಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಕಾರ್ಯಕ್ರಮ ಎಲ್ಲಾ ಭಕ್ತರ ಕೂಡುವಿಕೆಯಲ್ಲಿ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು. 



ಕಾರ್ಯಕ್ರಮದಲ್ಲಿ ಉದ್ಯಮಿ ಹರಿಯಪ್ಪ ಕೋಟ್ಯಾನ್, ಜಯಲಕ್ಷ್ಮೀ ಮಳಿಗೆಯ ವಿಜಯೇಂದ್ರ ಹೆಗ್ಡೆ, ವೆಂಕಟೇಶ್ ನಾಯಕ್, ಶ್ರೀಕಾಂತ್ ಭಟ್,  ಸುರೇಂದ್ರ, ಗಣೇಶ್ , ಸವಿತಾ ಹರೀಶ್ ರಾಂ , ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಾಧವ ಬನ್ನಂಜೆ ,   ಬ್ರಹ್ಮಕಲಶೋತ್ಸವ ಸಮಿತಿ ಸಂಚಾಲಕ ರಮೇಶ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು. ಸುಬ್ರಹ್ಮಣ್ಯ ಧನ್ಯವಾದ ವಿತ್ತರು. ಕೃತಿ ಮೂಡುಬೆಟ್ಟು ಕಾರ್ಯಕ್ರಮ ನಿರೂಪಿಸಿದರು. 



Ads on article

Advertise in articles 1

advertising articles 2

Advertise under the article