ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: ಉಗ್ರ ಶಾರಿಕ್ ಗೆ 10 ವರ್ಷ ಕಠಿಣ ಶಿಕ್ಷೆ
Tuesday, April 28, 2026
ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ನನ್ನು ಬೆಂಗಳೂರಿನ ಎನ್‌ಐಎ ವಿಶೇಷ ಕೋರ್ಟ್ ದೋಷಿ ಎಂದು ಘೋಷಿಸಿದೆ.
ಈ ಪ್ರಕರಣದ ತೀರ್ಪು ನೀಡಿರುವ ಎನ್‌ಐಎ ವಿಶೇಷ ಕೋರ್ಟ್ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಬಳಿ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡಿತ್ತು. ಆರೋಪಿ ಶಾರಿಕ್ ಕುಕ್ಕರ್ ನಲ್ಲಿ ಬಾಂಬ್ ್ ಸಾಗಿಸುತ್ತಿದ್ದಾಗಲೇ ಅದು ಆಕಸ್ಮಿಕವಾಗಿ ಸ್ಫೋಟಗೊಂಡಿತ್ತು.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎನ್ಐಎ ಕೋರ್ಟ್, ಐಪಿಸಿ ಸೆಕ್ಷನ್ 121ಎ, ಐಪಿಸಿ ಸೆಕ್ಷನ್ 326 ಹಾಗೂ ಭಯೋತ್ಪಾದನಾ ಚಟುವಟಿಕೆಗಳ ತಡೆ ಕಾಯ್ದೆಯಡಿ ಕಠಿಣ ಶಿಕ್ಷೆ ವಿಧಿಸಿದೆ. ಈ ಪ್ರಕರಣದಲ್ಲಿ ಶಾರಿಕ್ ತನ್ನ ಮೇಲಿರುವ ಎಲ್ಲಾ ಆರೋಪಗಳನ್ನು ಮತ್ತು ಮಾಡಿದ ತಪ್ಪನ್ನು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದ.