ಎ. 12: ಕುಕ್ಕಿಕಟ್ಟೆಯ ನಾದಶ್ರೀ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ವಂತ ಕಟ್ಟಡಕ್ಕೆ
Friday, April 10, 2026
ಉಡುಪಿ ಕುಕ್ಕಿಕಟ್ಟೆಯ ನಾದಶ್ರೀ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ಲಿ.) ಇದರ ನೂತನ ಬಹುಮಹಡಿ ಸ್ವಂತ ಕಟ್ಟಡ "ಶ್ರೀ ಲಕ್ಷ್ಮೀ" ಏ. 12ರಂದು ಬೆಳಿಗ್ಗೆ 10 ಗಂಟೆಗೆ ಕುಕ್ಕಿಕಟ್ಟೆಯಲ್ಲಿರುವ ಸಂಸ್ಥೆ ಕಚೇರಿ ಸಮೀಪ ಶುಭಾರಂಭಗೊಳ್ಳಲಿದೆ.
ನೂತನ ಕಟ್ಟಡವನ್ನು ಶಿವಮೊಗ್ಗ ಶಂಕರಘಟ್ಟ ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಡಾ. ಬಿ.ಎಸ್ ಶೇರಿಗಾರ್ ಉದ್ಘಾಟಿಸಲಿದ್ದಾರೆ. ಕುಕ್ಕಿಕಟ್ಟೆ ನಾದಶ್ರೀ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ಲಿ.) ಇದರ ಅಧ್ಯಕ್ಷ ಲಚ್ಚೇಂದ್ರ ದೇವಾಡಿಗ ಅಧ್ಯಕ್ಷತೆ ವಹಿಸಲಿದ್ದಾರೆ. ಭದ್ರತಾ ಕೊಠಡಿಯನ್ನು ಶಾಸಕ ಯಶ್ಪಾಲ್ ಸುವರ್ಣ ಉದ್ಘಾಟಿಸಲಿದ್ದಾರೆ. ಆಡಳಿತ ಕಚೇರಿಯನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಿಸಲಿದ್ದಾರೆ. ಸಭಾಭವನವನ್ನು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಲಿದ್ದಾರೆ. ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ.ಆರ್, ಕುಕ್ಕಿಕಟ್ಟೆ ಕೊರಂಗ್ರಪಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶ್ರೀಧರ್ ದೇವಾಡಿಗ, ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್. ವಸಂತ್ ಬೆರ್ನಾರ್ಡ್ ಅತಿಥಿಗಳಾಗಿ
ಭಾಗವಹಿಸಲಿದ್ದಾರೆ ಎಂದು ಸೊಸೈಟಿಯ ಉಪಾಧ್ಯಕ್ಷ ಮನೋಹರ ದೇವಾಡಿಗ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಾರ್ತಿಕ್ ಕುಮಾರ್ ತಿಳಿಸಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಅಪರಾಹ್ನ 12.30ರಿಂದ ನಮ್ಮ ಕಲಾವಿದೆರ್ ಬೆದ್ರ ತಂಡದ ಉಮೇಶ್ ಮಿಜಾರ್ ಬಳಗದಿಂದ ತೆಲಿಕೆದ ಗೊಂಚಿಲ್ ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.