-->
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ


ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಿಹಾರ ಮೂಲದ ಮನೋಜ್ ಕುಮಾರ್ (41)ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ-ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ಕಾಪು ವೃತ್ತದ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ, ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕರಾದ ತೇಜಸ್ವಿ ಟಿ.ಐ. ಮತ್ತು ಶುಭಕರ್ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಎಚ್‌.ಸಿ. ಮೊಹಮ್ಮದ್ ರಫೀಕ್ ಹಾಗೂ ಪಿಸಿಗಳಾದ ಗಣೇಶ್ ಮತ್ತು ಗಂಗಾಧರ್ ಅವರು ಬೆಂಗಳೂರಿನ ಯಲಹಂಕದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡರು.

ಬಂಧಿತನನ್ನು ಏಪ್ರಿಲ್ 16ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 6 ತಿಂಗಳ ಶಿಕ್ಷೆ ವಿಧಿಸಿದೆ. ನಂತರ ಆರೋಪಿಯನ್ನು ನ್ಯಾಯಾಂಗ ಬಂಧನದೊಂದಿಗೆ ಉಡುಪಿ ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.

ಆರೋಪಿ ಮನೋಜ್ ಕುಮಾರ್ ಲಾರಿ ಚಾಲಕರಾಗಿದ್ದು, 2012ರಲ್ಲಿ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಉದ್ಯಾವರದಲ್ಲಿ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯ ಸಾವಿಗೆ ಕಾರಣನಾಗಿದ್ದ. ಈ ಸಂಬಂಧ ನ್ಯಾಯಾಲಯವು ಶಿಕ್ಷೆ ವಿಧಿಸಿದ ಬಳಿಕ ಆತ ತಲೆಮರೆಸಿಕೊಂಡಿದ್ದನು.

Ads on article

Advertise in articles 1

advertising articles 2

Advertise under the article