ನಾಪತ್ತೆಯಾಗಿದ್ದ 14 ವರ್ಷದ ಬಾಲಕಿ ಶ್ರೀನಂದಾ ಶವವಾಗಿ ಪತ್ತೆ
Friday, April 10, 2026
ಏಪ್ರಿಲ್ 7 ರಂದು ಚಿಕ್ಕಮಗಳೂರು ತಾಲೂಕಿನ ಮಾಣಿಕ್ಯಧಾರ ಪರ್ವತದಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ 14 ವರ್ಷದ ಬಾಲಕಿ ಶ್ರೀನಂದಾ ಮೃತದೇಹ ಪತ್ತೆಯಾಗಿದೆ.
ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರ ಪರ್ವತದಲ್ಲಿ ಸುಮಾರು ಎರಡು ಸಾವಿರ ಅಡಿ ಆಳದಲ್ಲಿ ಶ್ರೀನಂದಾ ಮೃತದೇಹ ಪತ್ತೆಯಾಗಿದೆ. ಏಪ್ರಿಲ್ 7ರಂದು ನಾಪತ್ತೆಯಾಗಿದ್ದ ಬಾಲಕಿಯ ಶೋಧ ಕಾರ್ಯಕ್ಕಾಗಿ ಎಸ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳದಿಂದ ತೀವ್ರ ಕಾರ್ಯಾಚರಣೆ ನಡೆಸಲಾಗಿತ್ತು.