-->
ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಬಿತ್ತಿಚಿತ್ರ ಅನಾವರಣ

ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನದ ಬಿತ್ತಿಚಿತ್ರ ಅನಾವರಣ


ಉಡುಪಿ ತಾಲೂಕು 16ನೇ ಕನ್ನಡ ಸಾಹಿತ್ಯ ಸಮ್ಮೇಳನವು  ಮೇ. 3ರಂದು ಡಾ. ಭಾಸ್ಕರಾನಂದ ಕುಮಾರ್ ಅಧ್ಯಕ್ಷತೆಯಲ್ಲಿ ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ  ನಡೆಯಲಿದ್ದು, ಇದರ ಪ್ರಚಾರದ ಬಿತ್ತಿ ಚಿತ್ರವನ್ನು ಉಡುಪಿ ಶಾಸಕ ಯಶ್ ಪಾಲ ಸುವರ್ಣರವರು ಲೋಕಾರ್ಪಣೆಗೊಳಿಸಿದರು.

 ಬಳಿಕ ಮಾತನಾಡಿದ ಅವರು, ಕಸಾಪ ಉಡುಪಿ ತಾಲೂಕು ಘಟಕವು ವಿಶಿಷ್ಟ ಕಾರ್ಯಕ್ರಮಗಳನ್ನು ನಡೆಸುತ್ತಾ ಕನ್ನಡಿಗರ ಮನೆ ಮಾತಾಗಿದೆ ಎಂದರು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಘಟಕದ ಅಧ್ಯಕ್ಷ ರವಿರಾಜ್ ಎಚ್ ಪಿ , ಗೌರವ ಕಾರ್ಯದರ್ಶಿ ರಂಜಿನಿ ವಸಂತ್, ಸಮ್ಮೇಳನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕೊಡವೂರು, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು, ಸಾಮಾಜಿಕ ಜಾಲತಾಣದ ಮುಖ್ಯಸ್ಥ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಸಾಂಸ್ಕೃತಿಕ ಕಾರ್ಯದರ್ಶಿ ವಸಂತ್ ಮಹಿಳಾ ಪ್ರತಿನಿಧಿ ಅನಿತಾ ಸಿಕ್ವೇರಾ, ಸದಸ್ಯರಾದ ದೀಪ ಕರ್ಕಿ, ಪ್ರಸನ್ನ ಕುಮಾರ್ ಹಿರೇಮಠ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article