ಶಾಸಕ ಹ್ಯಾರಿಸ್ ಮನೆ ಸೇರಿ 17 ಕಡೆ ಇಡಿ ದಾಳಿ
Monday, April 20, 2026
ಶಾಸಕ ಹ್ಯಾರೀಸ್ ಮನೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳ್ಳಂ ಬೆಳಗ್ಗೆಯೇ ಹ್ಯಾರೀಸ್ ಮನೆ ಸೇರಿದಂತೆ 17 ಕಡೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹ್ಯಾರಿಸ್ ಬಿಡಿಎ ಅಧ್ಯಕ್ಷರೂ ಆಗಿದ್ದಾರೆ. ಇವರ ಪುತ್ರ ಮೊಹಮ್ಮದ್ ನಲಪಾಡ್ ಕಾಂಗ್ರೆಸ್ ಯುವ ಮುಖಂಡ. ಇವರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ.
ಬಿಟ್‌ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ. ಹ್ಯಾಕರ್ ಶ್ರೀಕಿ ಜೊತೆಯಲ್ಲಿ ಆರ್ಥಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಇ.ಡಿ ರೇಡ್ ಮಾಡಿದೆ. ಶ್ರೀಕಿ ಜೊತೆ ನಲಪಾಡ್ ಆರ್ಥಿಕ ವ್ಯವಹಾರ ಇಟ್ಟುಕೊಂಡಿದ್ದರು. ಇಬ್ಬರೂ ಸೇರಿ 4.5 ಕೋಟಿ ರೂ. ವಹಿವಾಟು ನಡೆಸಿದ್ದರು ಎನ್ನಲಾಗಿದೆ.
ಸದ್ಯ ಈ ಹಿಂದೆ ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ಜೊತೆ ಲಿಂಕ್ ಇರುವ ಆರೋಪದಡಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದಾರೆ.