-->
ಎ.20: ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷರಾಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರ ಅಧಿಕಾರ ಸ್ವೀಕಾರ ಸಮಾರಂಭ

ಎ.20: ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷರಾಗಿ ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಅವರ ಅಧಿಕಾರ ಸ್ವೀಕಾರ ಸಮಾರಂಭ


ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಡಾ. ಲೆಸ್ಲಿ ಕ್ಲಿಫರ್ಡ್ ದಿ'ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭವು ಏಪ್ರಿಲ್ 20ರಂದು ಸೋಮವಾರ ಬೆಳಗ್ಗೆ 9 ಗಂಟೆಗೆ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನೆರವೇರಲಿದೆ ಎಂದು ಉಡುಪಿ ಧರ್ಮಪ್ರಾಂತದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೇಸ ತಿಳಿಸಿದ್ದಾರೆ. 


ಉಡುಪಿಯ ಮದರ್ ಆಫ್ ಸಾರೋ ಚರ್ಚ್ ನ ಆವೆ ಮರಿಯ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಬೆಂಗಳೂರು ಗೋವಾ ಮತ್ತು ದಮನ್ ಮಹಾಧರ್ಮಪ್ರಾಂತ್ಯದ ಮಹಾಧರ್ಮಾಧ್ಯಕ್ಷರು ಹಾಗೂ FABC ಮತ್ತು CCBI ಅಧ್ಯಕ್ಷರಾದ ಕಾರ್ಡಿನಲ್ ಫಿಲಿಪ್ ನೆರಿ ಪೆರಾವೊ ಅವರ ನೇತೃತ್ವದಲ್ಲಿ ಪವಿತ್ರ ಬಲಿಪೂಜೆ ಸಂದರ್ಭದಲ್ಲಿ ನೂತನ ಧರ್ಮಾಧ್ಯಕ್ಷರಿಗೆ ಅಭಿಷೇಕ ನಡೆಯಲಿದೆ. 

ಬೆಂಗಳೂರು ಮಹಾಧರ್ಮಾಧ್ಯಕ್ಷ ಡಾ. ಪೀಟರ್ ಮಚಾದೊ ಹಾಗೂ ಉಡುಪಿ ಧರ್ಮಕ್ಷೇತ್ರದ ಪ್ರೇಷಿತ ಆಡಳಿತಾಧಿಕಾರಿ ಡಾ. ಜೆರಾಲ್ ಐಸಾಕ್ ಲೋಬೊ ಸಹ- ಅಭಿಷೇಕಕಾರರಾಗಿ ಭಾಗವಹಿಸಲಿದ್ದಾರೆ.

ಈ ಐತಿಹಾಸಿಕ ಸಮಾರಂಭದಲ್ಲಿ ಭಾರತ ಮತ್ತು ನೇಪಾಳದ ಅಪೊಸ್ಟೋಲಿಕ್ ನುನ್ಸಿಯೋ (ಪೋಪ್ ಅವರ ವ್ಯಾಟಿಕನ್ ರಾಯಭಾರಿ) ಡಾ. ಲಿಯೋಪೋಲ್ಡೊ ಗಿರೆಲ್ಲಿ, ವಿವಿಧ ಮಹಾಧರ್ಮಾಧ್ಯಕ್ಷರು , ಧರ್ಮಗುರುಗಳು, ಧಾರ್ಮಿಕ ಸಹೋದರ-ಸಹೋದರಿಯರು, ರಾಜಕೀಯ ನಾಯಕರು, ವಿವಿಧ ಸಮುದಾಯಗಳ ಗಣ್ಯರು ಹಾಗೂ ಸಾವಿರಾರು ಭಕ್ತರು ಸೇರಿದಂತೆ ಸುಮಾರು 5000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. 

ಧಾರ್ಮಿಕ ವಿಧಿವಿಧಾನಗಳ ನಂತರ ಅದೇ ವೇದಿಕೆಯಲ್ಲಿ ನೂತನ ಧರ್ಮಾಧ್ಯಕ್ಷರಿಗೆ ಪೌರ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಜಿಲ್ಲೆಯ ನಾಗರಿಕರ ಪರವಾಗಿ ಅಭಿನಂದನೆ ಸಲ್ಲಿಸಲಿದ್ದಾರೆ ಎಂದರು.

ನಿವೃತ್ತ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು 2012ರಿಂದ 2026ರವರೆಗೆ 13 ವರ್ಷಗಳ ಕಾಲ ಉಡುಪಿ ಧರ್ಮಕ್ಕೆಅ ಧರ್ಮಾಧ್ಯಕ್ಷರಾಗಿ ಸೇವೆ ಸಲ್ಲಿಸಿ ಇದೀಗ ನಿವೃತ್ತರಾಗಿದ್ದಾರೆ. ತಮ್ಮ ಸೇವಾ ಅವಧಿಯಲ್ಲಿ ಯುವಕರು, ಬಡವರು ಮತ್ತು ಹಿಂದುಳಿದವರ ಬಗ್ಗೆ ವಿ" ಕಾಳಜಿ ತೋರಿದ ಅವರು ಸರಳತೆ, ವಿನಯ ಹಾಗೂ ಸೌಮ್ಯ ಸ್ವಭಾವದಿಂದ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ. ಜಿಲ್ಲೆಯಲ್ಲಿ ಎಲ್ಲಾ ಧರ್ಮಗಳೊ ಅತ್ಯುತ್ತಮ ಸಂಬಂಧ ಹೊಂದಿರುವ ಅವರು ಸರ್ವ ಧರ್ಮ ಸಮನ್ವಯತೆಗೆ ವಿಶೇಷ ಕೊಡುಗೆ ನೀಡಿದ್ದಾರೆ ಎಂದರು.

ಪೋಪ್ ಲಿಯೋ XIV ಅವರು 2026 ಜನವರಿ 31ರಂದು ಡಾ. ಲೆಸ್ಲಿ ಸಿ. ಡಿ'ಸೋಜಾ ಅವರನ್ನು ಧರ್ಮಕ್ಷೇತ್ರದ ನೂತನ ಧರ್ಮಾಧ್ಯಕ್ಷರಾಗಿ ನೇಮಕ ಮಾಡಿದ್ದಾರೆ. 1962 ಆಗಸ್ಟ್ 19ರಂದು ಉಡುಪಿ ಜಿಲ್ಲೆಯ ಎರ್ಮಾಳಿನಲ್ಲಿ ಜನಿಸಿದ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಕಲಾ ಪದವಿ ಪ ಮಂಗಳೂರು ಸೆಂಟ್ ಜೋಸೆಫ್ ಇಂಟರ್ ಡಯೋಸಿಸನ್ ಗುರುಮಠದಲ್ಲಿ ತತ್ವಶಾಸ್ತ್ರ ಹಾಗೂ ಧರ್ಮಶಾಸ್ತ್ರ ಅಧ್ಯಯನ ನಡೆಸಿ, ಲೂವನ್ ಕ್ಯಾಥೋಲಿಕ್ ವಿಶ್ವವಿದ್ಯಾಲಯದಿಂದ ನೈತಿಕ ಧರ್ಮಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದಿದ್ದಾರೆ.

1990 ಮೇ 10ರಂದು ಧರ್ಮಗುರುಗಳಾಗಿ ಅಭಿಷೇಕಗೊಂಡ ಅವರು ಮಂಗಳೂರು ಹಾಗೂ ಉಡುಪಿ ಧರ್ಮಕ್ಷೇತ್ರಗಳಲ್ಲಿ ಧರ್ಮಗುರುಗಳಾಗಿ, ಪ್ರಾಧ್ಯಾಪಕ ಹಾಗೂ ವಿವಿಧ ಚರ್ಚುಗಳಲ್ಲಿ ಧರ್ಮಗುರುಗಳಾಗಿ ಸೇವೆ ಸಲ್ಲಿಸಿದ್ದಾರೆ.

ಅಂದು ಶಿವಮೊಗ್ಗ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾಗಿದ್ದ ಜೆರಾಲ್ ಐಸಾಕ್ ಲೋಬೊ ಅವರನ್ನು ಮೊದಲ ಧರ್ಮಾಧ್ಯಕ್ಷರಾಗಿ ನೇಮಕ ಮಾಡಲಾಯಿತು.

ಧರ್ಮಕ್ಷೇತ್ರವು ಕಾರ್ಕಳ, ಕುಂದಾಪುರ, ಕಾಪು, ಬೈಂದೂರು, ಹೆಬ್ರಿ, ಬ್ರಹ್ಮಾವರ ಹಾಗೂ ಉಡುಪಿ ತಾಲೂಕುಗಳನ್ನು ಒಳಗೊಂಡಿದೆ. ಬೆಂಗಳೂರು ಮಹಾಧರ್ಮಪ್ರಾಂತ್ಯದ ಅಧೀನದಲ್ಲಿರುವ ಈ ಧರ್ಮಕ್ಷೇತ್ರದ ಪ್ರಧಾನ ದೇವಾಲಯ ಕಲ್ಯಾಣಪುರದ ಮಿಲಾಗ್ರಿಸ್ ಕ್ಯಾಥೆಡ್ರಲ್ ಆಗಿದೆ.

ಸುಮಾರು 5,924 ಚದರ ಕಿಲೋಮೀಟರ್ ವ್ಯಾಪ್ತಿಯ ಈ ಧರ್ಮಕ್ಷೇತ್ರದಲ್ಲಿ 60,338 ಕ್ಯಾಥೋಲಿಕ್ ಭಕ್ಷರು ವಾಸಿಸುತ್ತಿದ್ದಾರೆ. 51 ಚರ್ಚುಗಳು. ಒಂದು ಬಸಿಲಿಕಾ, ಮೂರು ತೀರ್ಥಕ್ಷೇತ್ರಗಳು ಹಾಗೂ ಏಳು ಉಪಕೇಂದ್ರಗಳನ್ನು ಒಳಗೊಂಡಿದೆ. ಶಿಕ್ಷಣ ಕ್ಷೇತ್ರದಲ್ಲಿ ನರ್ಸರಿ ಶಾಲೆಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಕಾಲೇಜುಗಳು ಸೇರಿದಂತೆ ಅನೇಕ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದು ಮಹತದ ಸೇವೆ ಸಲ್ಲಿಸುತ್ತಿದೆ. ಧಾರ್ಮಿಕ, ಶೆ.ಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಉಡುಪಿ ಧರ್ಮಕ್ಷೇತ್ರವು ಮಹತ್ವದ ಪಾತ್ರವಹಿಸಿಕೊಂಡಿದೆ. ಸಮಾಜಸೇವೆ ಕ್ಷೇತ್ರದಲ್ಲಿಯೂ ವೃದ್ಧಾಶ್ರಮಗಳು, ಆಸತ್ರೆಗಳು, ಅನಾಥಾಶ್ರಮಗಳು ಹಾಗೂ ಪುನರ್ವಸತಿ ಕೇಂದ್ರಗಳನ್ನು ನಡೆಸುವ ಮೂಲಕ ಮಹತ್ವದ ಸೇವೆ ಸಲ್ಲಿಸುತ್ತಿದೆ. ಧಾರ್ಮಿಕ, ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಉಡುಪಿ ಧರ್ಮಕ್ಷೇತ್ರವು ಮಹತ್ವದ ಪಾತ್ರ ವಹಿಸಿಕೊಂಡಿದೆ ಎಂದರು. 

ಸುದ್ದಿಗೋಷ್ಠಿಯಲ್ಲಿ ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಡಾ|ಜೆರಾಲ್ಡ್ ಐಸಾಕ್ ಲೋಬೊ,ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಧರ್ಮಗುರು, ಕಾರ್ಯಕ್ರಮದ ಸಂಚಾಲಕರಾದ ಫರ್ಡಿನಾಂಡ್ ಗೊನ್ಸಾಲ್ವಿಸ್,ಉಡುಪಿ ಧರ್ಮಪ್ರಾಂತದ ಕುಲಪತಿಗಳಾದ ಸ್ಟೀವನ್ ಡಿಸೋಜಾ ಹಾಗೂ ಮಾಧ್ಯಮ ಸಂಯೋಜಕ ಮೈಕಲ್ ರೊಡ್ರಿಗಸ್ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article