-->
ಮೇ. 20: ಉಡುಪಿ ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ

ಮೇ. 20: ಉಡುಪಿ ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾಟ


ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಅಸೋಸಿಯೇಷನ್‌ನಿಂದ ಅಧಿಕೃತ ಮಾನ್ಯತೆ ಪಡೆದಿದ ಉಡುಪಿ ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿಯೇಷನ್  ಇದರ ಉದ್ಘಾಟನಾ ಸಮಾರಂಭವು ಮೇ. 20ರಂದು ನಡೆಯಲಿದೆ.  ಬೆಳಿಗ್ಗೆ 10:30 ಕ್ಕೆ ಮಣಿಪಾಲದ ಮಾಧವ ಕೃಪಾ ಶಾಲೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟಗಳು ಜರುಗಲಿವೆ ಎಂದು ಅಸೋಸಿಯೇಷನ್‌ ಅಧ್ಯಕ್ಷರಾದ ಪ್ರಸಾದ್ ಕಾಂಚನ್ ತಿಳಿಸಿದ್ದಾರೆ.  


ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. 

ಉಡುಪಿ ಜಿಲ್ಲೆ ಸ್ಥಾಪನೆಯಾಗಿ ಸುಮಾರು 25 ವರ್ಷಗಳಾದರೂ, ಜಿಲ್ಲೆಯ ಬಾಸ್ಕೆಟ್‌ಬಾಲ್ ಕ್ರೀಡಾಪಟುಗಳಿಗೆ ತಮ್ಮದೇ ಜಿಲ್ಲೆಯ ಹೆಸರಿನಲ್ಲಿ ಅಧಿಕೃತವಾಗಿ ಪ್ರತಿನಿಧಿಸುವ ಅವಕಾಶ ಇರಲಿಲ್ಲ. ಈ ಕೊರತೆಯನ್ನು ನೀಗಿಸುವ  ಉದ್ದೇಶದಿಂದ ಶ್ರೀ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಾಸ್ಕೆಟ್‌ಬಾಲ್ ಅಸೋಸಿಯೇಷನ್ ಸ್ಥಾಪಿಸಲಾಯಿತು ಮತ್ತು ಕರ್ನಾಟಕ ರಾಜ್ಯ ಬಾಸ್ಕೆಟ್‌ಬಾಲ್ ಅಸೋಸಿಯೇಷನ್‌ಗೆ ಮಾನ್ಯತೆಗಾಗಿ ಮನವಿ ಸಲ್ಲಿಸಲಾಯಿತು. ರಾಜ್ಯ ಅಸೋಸಿಯೇಷನ್ ಈ ಮನವಿಯನ್ನು  ಪರಿಗಣಿಸಿ ಈಗ ಅಧಿಕೃತ ಮಾನ್ಯತೆ ನೀಡಿದೆ. ಇದರಿಂದಾಗಿ ಇನ್ನು ಮುಂದೆ ಉಡುಪಿ ಜಿಲ್ಲೆಯ ಕ್ರೀಡಾಪಟುಗಳು ರಾಜ್ಯ ಮಟ್ಟದ ಪಂದ್ಯಾಟಗಳಲ್ಲಿ ನೇರವಾಗಿ ತಮ್ಮ ಜಿಲ್ಲೆಯನ್ನು ಪ್ರತಿನಿಧಿಸಲು ಅವಕಾಶ ದೊರೆಯಲಿದೆ.

ಮಣಿಪಾಲದ ಮಾಧವ ಕೃಪಾ ಶಾಲೆಯಲ್ಲಿ ನಡೆಯುವ ಈ ಕ್ರೀಡಾಕೂಟದಲ್ಲಿ ಜಿಲ್ಲೆಯ ಪ್ರತಿಭಾನ್ವಿತ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಆಟಗಾರರು ಮಣಿಪಾಲ ವಿಶ್ವವಿದ್ಯಾನಿಲಯದ ಸಹಕುಲಾಧಿಪತಿಗಳಾದ ಡಾ. ಎಚ್. ಎಸ್. ಬಲ್ಲಾಳ್‌, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರ ಗಣ್ಯರು ಭಾಗವಹಿಸಲಿದ್ದಾರೆ. ಈಗಾಗಲೇ ಹದಿನೆಂಟು ತಂಡಗಳು ಹೆಸರನ್ನು ನೋಂದಾಯಿಸಿಕೊಂಡಿವೆ. ಉಡುಪಿ ಜಿಲ್ಲೆಯ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಉಚಿತವಾಗಿ ಆಯೋಜಿಸಲಾಗಿದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಉಚಿತ ಊಟ, ವಸತಿ ವ್ಯವಸ್ಥೆ ಮಾಡಲಾಗಿದೆ ಎಂದರು. 

ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಎ.ಕೆ ಹುಸೇನ್, ಕೋಶಾಧಿಕಾರಿ ವಿನಯ್ , ಸದಸ್ಯ ನಂದ ಕಿಶೋರ್ ಮೊದಲಾದವರು ಉಪಸ್ಥಿತರಿದ್ದರು. 

Ads on article

Advertise in articles 1

advertising articles 2

Advertise under the article