ಬಡಗಬೆಟ್ಟು ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ 2025-26 ನೇ ಸಾಲಿನಲ್ಲಿ 18.13 ಕೋ.ರೂ ಲಾಭ
ರಾಜ್ಯದ ಪ್ರತಿಷ್ಠಿತ ಸಹಕಾರ ಸಂಸ್ಥೆಯಾದ ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಅಪರೇಟಿವ್ ಸೊಸ್ಯಾಟಿಯು 2025-26ನೇ ಸಾಲಿನಲ್ಲಿ ರೂ. 4062.29 ಕೋಟಿ ವಾರ್ಷಿಕ ವಹಿವಾಟು ನಡೆಸಿ ರೂ. 18.13 ಕೋಟಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷರಾದ ಜಯಕರ ಶೆಟ್ಟಿ ಇಂದ್ರಾಳಿಯವರು ತಿಳಿಸಿದರು.
₹1192.75 ಕೋಟಿ ವ್ಯವಹಾರ - ದಾಖಲೆ ಸಾಧನೆ
ಸಹಕಾರ ಕ್ಷೇತ್ರದಲ್ಲಿ 108 ವರ್ಷಗಳಿಂದ ಸಾರ್ಥಕ ಸೇವೆ ಸಲ್ಲಿಸುತ್ತಿರುವ ಸಂಘವು, 2025-26ನೇ ಆರ್ಥಿಕ ವರ್ಷಾಂತ್ಯಕ್ಕೆ 22,869 ಸದಸ್ಯರನ್ನು ಹೊಂದಿದ್ದು, ವರದಿ ವರ್ಷಾಂತ್ಯಕ್ಕೆ ರೂ. 658.80 ಕೋಟಿ ಠೇವಣಿ ಸಂಗ್ರಹಿಸಿ, ಕಳೆದ ಸಾಲಿಗಿಂತ ಶೇ.14.93ರಷ್ಟು ಏರಿಕೆ ಸಾಧಿಸಿದೆ. ಸದಸ್ಯರಿಗೆ ಗೃಹನಿರ್ಮಾಣ, ವಾಹನ ಖರೀದಿ, ಜಮೀನು ಖರೀದಿ ಮತ್ತು ಅಭಿವೃದ್ಧಿ, ವಾಣಿಜ್ಯ ಸಂಕೀರ್ಣ ಹಾಗೂ ವಸತಿ ಸಮುಚ್ಚಯ ನಿರ್ಮಾಣ, ಸ್ವಉದ್ಯೋಗ, ವಿದ್ಯಾಭ್ಯಾಸ, ಮದುವೆ, ಚಿನ್ನಾಭರಣಗಳ ಈಡಿನ ಮೇಲೆ ಹಾಗೂ ಮನೆವಾರ್ತೆಗಳಿಗೆ ಅಗತ್ಯ ದಾಖಲೆಗಳನ್ನು ಪಡೆದು ಸಾಲ ವಿತರಿಸಲಾಗುತ್ತಿದೆ.
ವರದಿ ವರ್ಷಾಂತ್ಯಕ್ಕೆ ಸದಸ್ಯರ ಹೊರಬಾಕಿ ಸಾಲ ರೂ. 533.96 ಕೋಟಿ ಆಗಿದ್ದು, ಇದು ಕಳೆದ ಸಾಲಿಗಿಂತ 2. 11.9.45 2. 5. 117.60 5. 268.30 ಹೂಡಿಕೆಗಳನ್ನು ಹೊಂದಿದ್ದು, ಒಟ್ಟು ರೂ. 791.46 ಕೋಟಿ ದುಡಿಯುವ ಬಂಡವಾಳವನ್ನು ಹೊಂದಿದೆ.
ಕುಂದಾಪುರದಲ್ಲಿ 12ನೇ ಶಾಖೆ ಶೀಘ್ರ ಆರಂಭ:
ಸಂಘವು ತನ್ನ ಕಾರ್ಯಕ್ಷೇತ್ರದಲ್ಲಿ 11 ಶಾಖೆಗಳನ್ನು ಹೊಂದಿದ್ದು, ಇವುಗಳಲ್ಲಿ 8 ಶಾಖೆಗಳು ಸಂಘದ ಸ್ವಂತ ನಿವೇಶನಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಸಂಘದ 12ನೇ ಶಾಖೆಗಾಗಿ ಕುಂದಾಪುರದ ಹೃದಯಭಾಗದಲ್ಲಿ ಸ್ವಂತ ಕಚೇರಿ ಖರೀದಿಸಲಾಗಿದ್ದು, ಅದರ ಕಾಮಗಾರಿ ಅಂತಿಮ ಹಂತದಲ್ಲಿದೆ. ಅಗತ್ಯ ಸೌಲಭ್ಯಗಳೊಂದಿಗೆ ಶಾಖೆಯು ಶೀಘ್ರದಲ್ಲೇ ಗ್ರಾಹಕರ ಸೇವೆಗೆ ಸಿದ್ಧವಾಗಲಿದೆ.
ಪ್ರಶಸ್ತಿಗಳು ಮತ್ತು ಸಾಮಾಜಿಕ ಸೇವೆ:
ಸಂಘವು 2 ಬಾರಿ ರಾಷ್ಟ್ರ ಪ್ರಶಸ್ತಿ, 9 ಬಾರಿ ರಾಜ್ಯ ಮಟ್ಟದ ಪ್ರಶಸ್ತಿ ಹಾಗೂ 19 ಬಾರಿ ಅವಿಭಜಿತ ದ.ಕ ಜಿಲ್ಲಾ ಪ್ರಶಸ್ತಿಗಳನ್ನು ಪಡೆದು ಯಶಸ್ವಿ ಕ್ರೆಡಿಟ್ ಸಹಕಾರ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ವ್ಯವಹಾರ ಲಾಭದೊಂದಿಗೆ ಸಾಮಾಜಿಕ ಹೊಣೆಗಾರಿಕೆಯನ್ನು ನಿಭಾಯಿಸುತ್ತಿರುವ ಸಂಘವು ಪ್ರತಿವರ್ಷ ಸುಮಾರು ರೂ. 25 ಲಕ್ಷವನ್ನು ಶಿಕ್ಷಣ ಆರೋಗ್ಯ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ಮೀಸಲಿಡುತ್ತಿದೆ.
ಸಹಕಾರ ಮಾಣಿಕ್ಯ ಪ್ರಶಸ್ತಿ:
72ನೇ ಅಖಿಲ ಭಾರತ ಸಹಕಾರ ಸಪ್ತಾಹ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಸಂಘಕ್ಕೆ 'ಸಹಕಾರ ಮಹಿ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯೊಂದಿಗೆ ನಗದು ಬಹುಮಾನ ಹಾಗೂ 5 ಗ್ರಾಂ ಬಂಗಾರದ ಪದಕ ಪಡೆದಿದೆ. ಸ ಕ್ಷೇತ್ರದಲ್ಲಿ ಸಂಘದ ಉತ್ತಮ ಸೇವೆ, ನಿರ್ವಹಣೆ ಹಾಗೂ ಸಾಧನೆಯನ್ನು ಪರಿಗಣಿಸಿ ಈ ಗೌರವ ದೊರೆತಿದ್ದು, ಜಿಲ್ಲೆಯ ಮೊದಲ ಕ್ರೆಡಿಟ್ ಸಹಕಾರ ಸಂಘವಾಗಿ ಈ ಪ್ರಶಸ್ತಿ ಪಡೆದಿದೆ.
ಡಿಜಿಟಲ್ ಸೇವೆಗಳು: ಚೇತನಾ ಮೊಬೈಲ್ ಆ್ಯಪ್
ಡಿಜಿಟಲೀಕರಣದ ಭಾಗವಾಗಿ ಅಭಿವೃದ್ಧಿಪಡಿಸಿದ "ಚೇತನಾ ಮೊಬೈಲ್ ಆ್ಯಪ್" ಮೂಲಕ ಗ್ರಾಹಕರು ತಮ್ಮ ಖಾತೆಗಳಿಗೆ ಸಂಬಂಧಿಸಿದಂತೆ ಹಣ ವರ್ಗಾವಣೆ, ಸಾಲ ಖಾತೆ ನಿರ್ವಹಣೆ ಹಾಗೂ ಸಂಘದ ನೂತನ ಯೋಜನೆಗಳ ಮಾಹಿತಿಯನ್ನು ಪಡೆಯಬಹುದಾಗಿದೆ. ಈ ಆ್ಯಪ್ ಗೆ ಬಳಕೆದಾರರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ.
ಗೂಗಲ್ ಪ್ಲೇ ಸ್ಟೋರ್ ಹಾಗೂ ಆ್ಯಪಲ್ ಆ್ಯಪ್ ಸ್ಟೋರ್‌ನಲ್ಲಿ ಲಭ್ಯವಿರುವ ಈ ಆ್ಯಪ್‌ನ ಸದುಪಯೋಗ ಪಡೆಯುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ಶಾಖೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.
ಸಂಘದ ಎಲ್ಲಾ ಶಾಖೆಗಳಲ್ಲಿ ಸೇಫ್ ಲಾಕರ್, ಇ-ಸ್ಟಾಂಪಿಂಗ್, ಪಾನ್ ಕಾರ್ಡ್ ಸೇವೆ, ಹಣ ವರ್ಗಾವಣೆ ಸೌಲಭ್ಯ, ಆರೋಗ್ಯ ಕಾರ್ಡ್, ವಿಮಾ ಸೇವೆಗಳು, ದೈನಿಕ ಠೇವಣಿ ಸಂಗ್ರಾಹಕರಿಗೆ ಮೊಬೈಲ್ ಮೂಲಕವೇ ಠೇವಣಿ ಸಂಗ್ರಹಣೆಗೆ ಅವಕಾಶ ಒದಗಿಸಿರುವುದು, "0" ಬ್ಯಾಲೆನ್ಸ್ ವಿದ್ಯಾನಿಧಿ ಖಾತೆ, ಮಿಸ್ಟ್ ಕಾಲ್ ಸೇವೆ ಹಾಗೂ ಉಚಿತ SMS ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.
ಮುಂದಿನ ಗುರಿ – ₹ 5000 ಕೋಟಿ ವಾರ್ಷಿಕ ವಹಿವಾಟು, ₹1400 ಕೋಟಿ ಒಟ್ಟು ವ್ಯವಹಾರ
ಮುಂದಿನ ವರ್ಷದಲ್ಲಿ ರೂ. 750 ಕೋಟಿ ಠೇವಣಿ ಹಾಗೂ ರೂ. 650 ಕೋಟಿ ಸಾಲ ವಿತರಣೆ ಸೇರಿದಂತೆ ಒಟ್ಟು ರೂ. 1400 ಕೋಟಿ ವ್ಯವಹಾರ ನಡೆಸುವ ಗುರಿಯನ್ನು ಸಂಸ್ಥೆಯು ಹೊಂದಿದೆ.
ಇದಲ್ಲದೆ, ಉಡುಪಿಯ ಹೃದಯಭಾಗದಲ್ಲಿ ಈಗಾಗಲೇ ಖರೀದಿಸಿರುವ 1 ಎಕರೆ ಜಾಗದಲ್ಲಿ ಅಂದಾಜು ರೂ. 10 ಕೋಟಿ ವೆಚ್ಚದಲ್ಲಿ "ಸಹಕಾರ ಸೌಧ" ನಿರ್ಮಾಣದ ಯೋಜನೆಯನ್ನು ಕೈಗೊಂಡಿದೆ.
ಪ್ರತಿಯೊಂದು ಶಾಖೆಯಲ್ಲಿ ಶಾಖಾ ಸಲಹಾ ಸಮಿತಿಗಳನ್ನು ರಚಿಸಲಾಗಿದ್ದು, ಅವುಗಳ ಮೇಲ್ವಿಚಾರಣೆಯಲ್ಲಿ ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ ಎಂದು ತಿಳಿಸಿದರು.
ಉಪಾಧ್ಯಕ್ಷರಾದ ಜಾರ್ಜ್ ಸಾಮ್ಯುಯೆಲ್, ಆಡಳಿತ ಮಂಡಳಿಯ ಸದಸ್ಯರಾದ ಸಂಜೀವ ಕಾಂಚನ್, ಪುರುಷೋತ್ತಮ ಪಿ. ಶೆಟ್ಟಿ, ಉಮಾನಾಥ ಎಲ್, ವಿನಯ ಕುಮಾರ್ ಟಿ.ಎ, ಪದ್ಮನಾಭ ನಾಯಕ್, ಹಾಜಿ ಸೈಯದ್ ಅಬ್ದುಲ್ ರಜಾಕ್, ಸದಾಶಿವ ನಾಯ್ಕ, ಮನೋಹರ ಎಸ್. ಶೆಟ್ಟಿ, ಸಾಧು ಸಾಲ್ಯಾನ್, ಜಯಾ ಶೆಟ್ಟಿ, ಗಾಯತ್ರಿ ಎಸ್. ಭಟ್, ಪ್ರಧಾನ ವ್ಯವಸ್ಥಾಪಕರಾದ ರಾಜೇಶ್ ವಿ. ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
