ದೈವದ ಭಂಡಾರ ಸಾಗುತ್ತಿದ್ದ ವೇಳೆ ಕಾಲು ಸಂಕ ಕುಸಿತ: 8 ಮಂದಿಗೆ ಗಾಯ
Saturday, April 25, 2026
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲು ಎಂಬಲ್ಲಿ ದೈವದ ಭಂಡಾರ ಸಾಗುತ್ತಿದ್ದ ವೇಳೆ ಕಾಲುಸಂಕ ್ಏಕಾಏಕಿ ಮುರಿದು ಬಿದ್ದು ಎಂಟು ಮಂದಿ ಗಾಯಗೊಂಡ ಘಟನೆ ನಡೆದಿದೆ.
ತಾಕೋಡೆ ಬರ್ಕೆ ಧರ್ಮನೇಮಕ್ಕೆ ಪಲ್ಲಕ್ಕಿಯಲ್ಲಿ ದೈವದ ಭಂಡಾರವನ್ನು ಹೊತ್ತು ಕೊಂಡೊಯ್ಯುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಕೊಂಬು ಹಾಗೂ ಬ್ಯಾಂಡ್ ವಾದ್ಯಗಳೊಂದಿಗೆ ಮೆರವಣಿಗೆ ಸಾಗುತ್ತಿದ್ದ ವೇಳೆ ಏಕಾಏಕಿ ಕಾಲುಸಂಕ ಕುಸಿದು ಪಲ್ಲಕ್ಕಿ ಉರುಳಿ ಬಿದ್ದಿದೆ.
ಘಟನೆಯಲ್ಲಿ ಸುನಿಲ್ ಶೆಟ್ಟಿ ಮುಕಾಲ್ದಿ (ಮಾರೂರು), ಲೋಕೇಶ್ ಭಂಡಾರಿ ಸೇರಿದಂತೆ ಪಲ್ಲಕ್ಕಿ ಹೊತ್ತವರನ್ನೊಳಗೊಂಡು ಒಟ್ಟು ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಘಡದಲ್ಲಿ ಪಲ್ಲಕ್ಕಿಯಲ್ಲಿದ್ದ ಮೊಗಮೂರ್ತಿ ಹಾಗೂ ಇತರೆ ಧಾರ್ಮಿಕ ಪರಿಕರಗಳಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ.