-->
ಬೆಂಗಳೂರಿನಲ್ಲಿ ಭಾರೀ ಮಳೆ: ಕಂಪೌಂಡ್ ಕುಸಿದು 8 ಮಂದಿ ದಾರುಣ ಸಾವು

ಬೆಂಗಳೂರಿನಲ್ಲಿ ಭಾರೀ ಮಳೆ: ಕಂಪೌಂಡ್ ಕುಸಿದು 8 ಮಂದಿ ದಾರುಣ ಸಾವು


ಬೆಂಗಳೂರಿನಲ್ಲಿ ಇಂದು ಸಂಜೆ ಸುರಿದ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಂಪೌಂಡ್ ಗೋಡೆ ಕುಸಿದು 8 ಮಂದಿ ಮೃತಪಟ್ಟ ದಾರುಣ ಘಟನೆ ನಡೆದಿದೆ. 


ಮೃತಪಟ್ಟವರ ಪೈಕಿ ಕೆಲವರು ಫುಟ್‌ಪಾತ್‌ ಬಳಿ ತಳ್ಳುಗಾಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಹಳೆಯ ಗೋಡೆಗೆ ದೊಡ್ಡ ಟಾರ್ಪಲ್‌ ಹಾಕಿ ವ್ಯಾಪಾರ ಮಾಡುತ್ತಿದ್ದರು. ದಿಢೀರನೆ ಮಳೆ ಜೋರಾಗಿ ಸುರಿದ ಕಾರಣ ವ್ಯಾಪಾರಿಗಳು ಮತ್ತು ಪಾದಚಾರಿಗಳು ಟಾರ್ಪಲ್‌ ಆಡಿ ನಿಂತಿದ್ದಾರೆ. ಈ ವೇಳೆ ಬಿರುಗಾಳಿ ಸಹಿತ ಮಳೆಗೆ ಗೋಡೆ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಎಂಟು ಮಂದಿ ಮೃತಪಟ್ಟಿದ್ದು, ಗಂಬೀರ ಗಾಯಗೊಂಡ ಮೂವರು ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. 

ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಡಿಸಿಎಂ, ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಕೂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

Ads on article

Advertise in articles 1

advertising articles 2

Advertise under the article