ನೇಣು ಬಿಗಿದು 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
Friday, April 03, 2026
9ನೇ ತರಗತಿ ವಿದ್ಯಾರ್ಥಿಯೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ನಗರದ ಮಂಗಲಪಾಂಡೆ ರಸ್ತೆಯಲ್ಲಿ ನಡೆದಿದೆ.
ಮಂಗಲಪಾಂಡೆ ರಸ್ತೆ ನಿವಾಸಿ ಕೌಶಿಕ್ ಬಾಯರಿ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಕುಂದಾಪುರ ಬೋರ್ಡ್ ಹೈಸ್ಕೂಲ್ ನಲ್ಲಿ 9ನೇ ತರಗತಿ ಓದುತ್ತಿದ್ದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಕುಂದಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.