-->
ನಾಳೆ (ಎ.9) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ನಾಳೆ (ಎ.9) ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ


ಪ್ರಸ್ತುತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ನಾಳೆ (ಎ.9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಗೊಳ್ಳಲಿದೆ.

ಗುರುವಾರ ಮಧ್ಯಾಹ್ನ 3.00 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದ್ದು, ಸದರಿ ಫಲಿತಾಂಶವನ್ನು https://karresults.nic.in ಲಿಂಕ್‌ ಮೂಲಕ ಹಾಗೂ KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಲಿಯಿಂದ ರವಾನಿಸಲಾಗುವುದು.ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ನಾಳೆ ಮಧ್ಯಾಹ್ನ 3.00 ಗಂಟೆಗೆ ಲಭ್ಯಗೊಳಿಸಲಾಗುವುದು. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಮಂಡಳಿಯ ಪ್ರಕಟನೆ ತಿಳಿಸಿದೆ.

ರಾಜ್ಯದಲ್ಲಿ ನಾಳೆ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿರುವುದರಿಂದ, ಮತದಾನದ ಪ್ರಕ್ರಿಯೆಗಳು ಮುಕ್ತಾಯವಾದ ನಂತರ ಸಂಜೆ ವೇಳೆಗೆ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ. 

Ads on article

Advertise in articles 1

advertising articles 2

Advertise under the article