-->
ಮನೆಯಲ್ಲಿ ಬೆಂಕಿ ಆಕಸ್ಮಿಕ: ಲಕ್ಷಾಂತರ ಮೌಲ್ಯದ ಸೊತ್ತುಗಳು ಭಸ್ಮ

ಮನೆಯಲ್ಲಿ ಬೆಂಕಿ ಆಕಸ್ಮಿಕ: ಲಕ್ಷಾಂತರ ಮೌಲ್ಯದ ಸೊತ್ತುಗಳು ಭಸ್ಮ


ಬೆಂಕಿ ಅವಘಡದಿಂದಾಗಿ ಮನೆಯೊಂದು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಕುಂದಾಪುರದ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸಮೀಪದ ಹಂದಕುಂದ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.

ಹಂದಕುಂದ ಅರೆಕಲ್ಲು ನಿವಾಸಿ ಗಣಪು ಶೆಡ್ತಿ ಎಂಬುವವರ ಮನೆಯಲ್ಲಿ ಅವಘಡ ಸಂಭವಿಸಿದೆ. ಶನಿವಾರ ರಾತ್ರಿ ಮನೆಯ ಸಮೀಪದ ಬೇರೊಂದು ಮನೆಯಲ್ಲಿ ಭಜನಾ ಕಾರ್ಯಕ್ರಮವಿದ್ದ ಕಾರಣ, ಗಣಪು ಶೆಡ್ತಿ ಹಾಗೂ ಅವರ ಮೊಮ್ಮಗ ಮನೆಗೆ ಬೀಗ ಹಾಕಿ ತೆರಳಿದ್ದರು. ಈ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿಯ ಕೆನ್ನಾಲಿಗೆಗೆ ಮನೆ ಸಂಪೂರ್ಣ ಸುಟ್ಟು ಹೋಗಿದೆ. ಮನೆಯೊಳಗಿದ್ದ ಚಿನ್ನಾಭರಣ ಹಾಗೂ ನಗದು ಟಿವಿ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳು ಬಟ್ಟೆಬರೆ ಹಾಗೂ ಅಡುಗೆ ಪಾತ್ರೆಗಳು ಸೇರಿದಂತೆ ಎಲ್ಲಾ ಗೃಹೋಪಯೋಗಿ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಬೂದಿಯಾಗಿವೆ.

Ads on article

Advertise in articles 1

advertising articles 2

Advertise under the article