🔥ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಭಾರೀ ಅಗ್ನಿ ದುರಂತ 🔥
Sunday, April 26, 2026
ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಹಲವು ಅಂಗಡಿಗಳು ಭಸ್ಮಗೊಂಡಿವೆ.
ಇಂದು ಸಂಜೆ 5.30 ರ ಸುಮಾರಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ನೋಡ ನೋಡುತ್ತಿದ್ದಂತೆ ಬೆಂಕಿ ವ್ಯಾಪಕವಾಗಿ ಹರಡಿದ್ದು ಹಲವು ಅಂಗಡಿಗಳು ಭಸ್ಮ ಗೊಂಡಿವೆ.
ಕಟ್ಟಡದಲ್ಲಿದ್ದ ಮೊಬೈಲ್ ಅಂಗಡಿ ಹಾಗೂ ಹಾರ್ಡ್‌ವೇರ್ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಜ್ವಾಲೆಗಳು ವ್ಯಾಪಿಸಿ ಅಂಗಡಿಗಳಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಘಟನೆಯಿಂದ ವ್ಯಾಪಾರಿಗಳಿಗೆ ಭಾರೀ ಆರ್ಥಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಇನ್ನೂ ಕೂಡ ಬೆಂಕಿ ಹತೋಟಿಗೆ ಬಂದಿಲ್ಲ. ಅಗ್ನಿಶಾಮಕ ದಳದವರ ಕಾರ್ಯಾಚರಣೆ ಮುಂದುವರೆದಿದೆ.