ಭಾಷಣದ ವೇಳೆ ಕುಸಿದು ಬಿದ್ದ ನಿವೃತ್ತ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ
Friday, April 03, 2026
ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಇಂದು (ಏಪ್ರಿಲ್ 03) ಸೌಟ್ಸ್ & ಗೈಡ್ಸ್ ಆಯುಕ್ತ PGR ಸಿಂಧ್ಯಾ ಅವರಿಗೆ ಆಯೋಜಿಸಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಸಂತೋಷ್ ಹೆಗ್ಡೆ ಭಾಗವಹಿಸಿದ್ದರು. ಈ ವೇಳೆ ಭಾಷಣ ಮಾಡುವಾಗ ಅಸ್ವಸ್ಥಗೊಂಡಿದ್ದಾರೆ. ಬಳಿಕ ಭಾಷಣ ಮುಗಿಸಿ ವೇದಿಕೆ ಮೇಲಿನ ಕುರ್ಚಿ ಮೇಲೆ ಕುಳಿತುಕೊಳ್ಳುವಾಗ ಕುಸಿದುಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸದ್ಯ ಅವರಿಗೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ