-->
ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ


ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತ್ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ ಗೌಡ ಕೊಲೆ ಪ್ರಕರಣದಲ್ಲಿ ದೋಷಿಗಳಾದ ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ‌ ನ್ಯಾಯಾಲಯ ತೀರ್ಪು ನೀಡಿದೆ.

ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್‌ ಕುಲಕರ್ಣಿ ಸೇರಿ 17 ಮಂದಿಯನ್ನು ದೋಷಿಗಳೆಂದು ತೀರ್ಮಾನಿಸಿ‌ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಬುಧವಾರ ತೀರ್ಪು ನೀಡಿದ್ದರಲ್ಲದೆ, ಶಿಕ್ಷೆಯ ಪ್ರಮಾಣ ನಿಗದಿಪಡಿಸಲು ಪ್ರಕರಣದ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದ್ದರು. ಇದೀಗ ತೀರ್ಪು ಪ್ರಕಟವಾಗಿದೆ.

Ads on article

Advertise in articles 1

advertising articles 2

Advertise under the article