ಹನುಮ ಜಯಂತಿ ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದಲ್ಲಿ ವಾಯುಸ್ತುತಿ ಪುನಶ್ಚರಣೆ ಹೋಮ
Thursday, April 02, 2026
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಇಂದು ಹನುಮಜಯಂತಿ ಪ್ರಯುಕ್ತ ಮುಖ್ಯಪ್ರಾಣ ದೇವರಿಗೆ ವಿಶೇಷ ಅಲಂಕಾರ ಹಾಗೂ ಯಾಗಶಾಲೆಯಲ್ಲಿ ವಾಯುಸ್ತುತಿ ಪುನಶ್ಚರಣೆ ಹೋಮ ನಡೆಯಿತು.
ಪರ್ಯಾಯ ಪೀಠಾಧೀಶ ಶೀರೂರು ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಪೂರ್ಣಾಹುತಿ ಸಂದರ್ಭದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಹಾಗೂ ಶಾಸಕರಾದ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

