-->
ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆ ಬಿಡುಗಡೆ


ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ಡಾ. ಭಾಸ್ಕರಾನಂದ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಭೀಷ್ಮೋತ್ಸವ ದ ಆಮಂತ್ರಣ ಪತ್ರಿಕೆಯನ್ನು ಸಾಂಸ್ಕೃತಿಕ ರಾಯಭಾರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಅವರು ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಅವರು, ನಾನು ಬರುತ್ತೇನೆ, ನೀವೆಲ್ಲಾ ಬನ್ನಿ ಎಂದು ಕನ್ನಡಾಭಿಮಾನಿಗಳಿಗೆ ಕರೆಯಿತ್ತು ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ, ಕಸಾಪ ಗೌರವ ಸಲಹೆಗಾರರಾದ ಉಡುಪಿ ವಿಶ್ವನಾಥ್ ಶೆಣೈ, ಪ್ರೊ. ಶಂಕರ್,  ಗೌರವ ಕಾರ್ಯದರ್ಶಿಗಳಾದ ಜನಾದ೯ನ್ ಕೊಡವೂರು, ರಂಜನಿ ವಸಂತ್, ಗೌರವ ಕೋಶಾದ್ಯಕ್ಷ ರಾಜೇಶ್ ಭಟ್ ಪಣಿಯಾಡಿ, ಮಾಧ್ಯಮ ಪ್ರತಿನಿಧಿ ಆಸ್ಟ್ರೋ ಮೋಹನ್, ಸಂಘಟನಾ ಕಾಯ೯ದಶಿ೯ ರಾಘವೇಂದ್ರ ಪ್ರಭು ಕವಾ೯ಲು, ವಸಂತ್, ದೀಪಾ ಕಕಿ೯, ಚಂದ್ರಶೇಖರ್ , ಸಾಮಾಜಿಕ ಜಾಲತಾಣ ಸಂಚಾಲಕ ಸಿದ್ದ ಬಸಯ್ಯ ಸ್ವಾಮಿ ಚಿಕ್ಕ ಮಠ ಮೊದಲಾದವರು ಉಪಸ್ಥಿತರಿದ್ದರು

Ads on article

Advertise in articles 1

advertising articles 2

Advertise under the article